Mysore
30
clear sky

Social Media

ಶನಿವಾರ, 31 ಜನವರಿ 2026
Light
Dark

ಜಲ ಜೀವನ ಮಿಷನ್‌ ಅನುಷ್ಠಾನ ಜವಾಬ್ದಾರಿಯುತವಾಗಿರಲಿ : ರಂಜಿತ್‌ ಕುಮಾರ್‌

ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ರಂಜಿತ್ ಕುಮಾರ್ ಎ.ಎಸ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮೈಸೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ವಾಶ್ ಕಾರ್ಯಕ್ರಮಗಳ ಕುರಿತು ನಡೆದ ಮೈಸೂರು ಹಾಗೂ ಟಿ ನರಸೀಪುರ ತಾಲೂಕುಗಳ ಗೌರವಾನ್ವಿತ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿಗೊಳಿಸುವ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಡಬೇಕು ಅದರ ನಡವಳಿಯನ್ನು ಜಿಲ್ಲಾ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಗಳಲ್ಲೂ ನೀರು ಸರಬರಾಜು ಮಾಡುವಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮೈಸೂರು ಉಪ ಕಾರ್ಯದರ್ಶಿ ಅಭಿವೃದ್ಧಿಯ ಶ್ರೀ ಕೃಷ್ಣ ರಾಜು ರವರು ಮಾತನಾಡಿ ಪ್ರತಿ ಮನೆಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಕಡೆಯಲ್ಲೂ ಓವರ್ ಹೆಡ್ ಟ್ಯಾಂಕ್ಗಳ ನಿರ್ಮಾಣ ಸೇರಿದಂತೆ ಜಲ ಜೀವನ್ ಮಿಷನ್ ಯೋಜನೆಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, ಪೂರ್ಣಗೊಂಡ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಬೇಕೆಂದು ಬಳಿಕ ನಿರ್ವಹಣೆ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ರತ್ನಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ಜೋಸೆಫ್ ಜಿ. ಎಂ ರೆಬೆಲೊ ರವರು ಶಿಬಿರಾರ್ಥಿಗಳಿಗೆ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಈ ತರಬೇತಿ ಕಾರ್ಯಗಾರದಲ್ಲಿ ಮೈಸೂರು ಎಇಇ ಹರ್ಷದ್ ಪಾಷಾ, ಟಿ ನರಸೀಪುರ ಎಇಇ ಶಿವರಾಜು ಕೆ, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್, ಭಗೀರಥ ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀ ಚಂಗಪ್ಪ, ಜಲಜೀವ ಮಿಷನ್ ಯೋಜನೆಯ ಜಿಲ್ಲಾ ತಂಡದ ನಾಯಕರಾದ ಶ್ರೀ ಮಹೇಶ್ ಹೆಚ್.ಪಿ, ಹಾಜರಿದ್ದರು.

Tags:
error: Content is protected !!