ಮೈಸೂರು

ಜಲ ಜೀವನ ಮಿಷನ್‌ ಅನುಷ್ಠಾನ ಜವಾಬ್ದಾರಿಯುತವಾಗಿರಲಿ : ರಂಜಿತ್‌ ಕುಮಾರ್‌

ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ರಂಜಿತ್ ಕುಮಾರ್ ಎ.ಎಸ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮೈಸೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ವಾಶ್ ಕಾರ್ಯಕ್ರಮಗಳ ಕುರಿತು ನಡೆದ ಮೈಸೂರು ಹಾಗೂ ಟಿ ನರಸೀಪುರ ತಾಲೂಕುಗಳ ಗೌರವಾನ್ವಿತ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿಗೊಳಿಸುವ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಡಬೇಕು ಅದರ ನಡವಳಿಯನ್ನು ಜಿಲ್ಲಾ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಗಳಲ್ಲೂ ನೀರು ಸರಬರಾಜು ಮಾಡುವಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮೈಸೂರು ಉಪ ಕಾರ್ಯದರ್ಶಿ ಅಭಿವೃದ್ಧಿಯ ಶ್ರೀ ಕೃಷ್ಣ ರಾಜು ರವರು ಮಾತನಾಡಿ ಪ್ರತಿ ಮನೆಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಕಡೆಯಲ್ಲೂ ಓವರ್ ಹೆಡ್ ಟ್ಯಾಂಕ್ಗಳ ನಿರ್ಮಾಣ ಸೇರಿದಂತೆ ಜಲ ಜೀವನ್ ಮಿಷನ್ ಯೋಜನೆಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದ್ದು, ಪೂರ್ಣಗೊಂಡ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಬೇಕೆಂದು ಬಳಿಕ ನಿರ್ವಹಣೆ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ರತ್ನಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀ ಜೋಸೆಫ್ ಜಿ. ಎಂ ರೆಬೆಲೊ ರವರು ಶಿಬಿರಾರ್ಥಿಗಳಿಗೆ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಈ ತರಬೇತಿ ಕಾರ್ಯಗಾರದಲ್ಲಿ ಮೈಸೂರು ಎಇಇ ಹರ್ಷದ್ ಪಾಷಾ, ಟಿ ನರಸೀಪುರ ಎಇಇ ಶಿವರಾಜು ಕೆ, ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್, ಭಗೀರಥ ಸಂಸ್ಥೆಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀ ಚಂಗಪ್ಪ, ಜಲಜೀವ ಮಿಷನ್ ಯೋಜನೆಯ ಜಿಲ್ಲಾ ತಂಡದ ನಾಯಕರಾದ ಶ್ರೀ ಮಹೇಶ್ ಹೆಚ್.ಪಿ, ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳ ಪ್ರವಾಹದಲ್ಲಿ ನಾಪತ್ತೆಯಾದ 213 ಭಾರತೀಯರು: ಮರಣ ಘೋಷಣೆ ಪ್ರಕ್ರಿಯೆ ಆರಂಭ

ಕಠ್ಮಂಡು: ನೇಪಾಳದ ಭೀಕರ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 213 ಭಾರತೀಯರನ್ನು ಕಾನೂನುಬದ್ಧವಾಗಿ ಮೃತಪಟ್ಟಿದ್ದಾರೆಂದು ಘೋಷಿಸುವ ಪ್ರಕ್ರಿಯೆಯನ್ನು ಅಲ್ಲಿನ ಸರ್ಕಾರ ಆರಂಭಿಸಿದೆ ಎಂದು…

6 hours ago

ನ.30ಕ್ಕೆ ಲೋಕಸಭೆ, ಡಿ.2ಕ್ಕೆ ರಾಜ್ಯಸಭೆ ಕಲಾಪ: ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಯಾಗುತ್ತಾ?

ನವದೆಹಲಿ: ಸಂಸತ್ತಿನ ಉಭಯ ಸದನಗಳು ಮತ್ತೆ ಸಮಾವೇಶಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ. ನವೆಂಬರ್‌ 30ರ ಸೋಮವಾರ ಬೆಳಗ್ಗೆ ಲೋಕಸಭೆ…

6 hours ago

ಹಾಸನದ ನಿಡುಡಿ ಬಳಿ ಹಾಡಹಗಲೇ ಜೋಡಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ

ಹಾಸನ: ಜನರು ಓಡಾಡುವ ರಸ್ತೆಯಲ್ಲೇ ಹಾಡಹಗಲು ಎರಡು ಚಿರತೆಗಳು ಕಾಣಿಸಿಕೊಂಡಿವೆ. ಈ ಘಟನೆ ನಡೆದದ್ದು ಹಾಸನ ತಾಲೂಕಿನ ನಿಡುಡಿ ಗ್ರಾಮದ…

7 hours ago

11ನೇ ದಿನಕ್ಕೆ ಆಶಾ ಹೋರಾಟ | ತಡರಾತ್ರಿ ಕಾರ್ಯಕರ್ತೆ ಅಸ್ವಸ್ಥ

ಬೆಂಗಳೂರು:  ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 38 ವರ್ಷದ ಗಂಗಾ ತಡರಾತ್ರಿ…

7 hours ago

ಮೈಸೂರು ಸೇರಿ 8 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | ನವೆಂಬರ್ 29, 30ರಂದು ರಾಜ್ಯಾದ್ಯಂತ ಒಣಹವೆ

ಬೆಂಗಳೂರು: ಮೈಸೂರು ಸೇರಿದಂತೆ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ…

7 hours ago

ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕೆಎಸ್‌ಆರ್‌ಟಿಸಿ ಬಸ್‌ಗಳು ಸೂಕ್ತ ನಿರ್ವಹಣೆ ಇಲ್ಲದೆ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಕೆಲವು ಬಸ್‌ಗಳಂತೂ…

7 hours ago