ಮೈಸೂರು

ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ: ಡಾ. ಕೆ.ವಿ ರಾಜೇಂದ್ರ

ಮೈಸೂರು: ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು.

ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಹಾಗೂ ಯುವನಿಧಿ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟೀಯ ಯುವದಿನದಂದು ಜಾರಿಯಾಗುತ್ತಿರುವ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಜನರಿಗೆ ಪದವಿಧರರಿಗೆ ರೂ.3000 ಹಾಗೂ ಡಿಪ್ಲೋಮಾ ಮಾಡಿದವರಿಗೆ ರೂ.1500 ಗಳನ್ನು ನೀಡಲಾಗುತ್ತಿದೆ. ಈ ಹಣವನ್ನು ಯಾವುದೇ ರೀತಿಯ ದುರುಪಯೋಗ ಪಡಿಸಿಕೊಳ್ಳದೆ ತಮ್ಮ ಮುಂದಿನ ವಿದ್ಯಾಭ್ಯಾಸ ಇಲ್ಲವೇ ಸ್ವಯಂ ಉದ್ಯೋಗಕ್ಕಾಗಿ ಬಳಸಿಕೊಳ್ಳಬೇಕು. ಸಮಯ ಎಂಬುದು ಕ್ಷಣಾರ್ಧದಲ್ಲಿ ಕಳೆದುಹೋಗುತ್ತದೆ ಹಾಗಾಗಿ ಇದನ್ನು ನಿಮ್ಮ ಗುರಿ ತಲುಪಲು ಒಂದು ಸಹಾಯವಾಗಿ ಬಳಸಿಕೊಂಡು ಇದರ ಪ್ರಯೋಜನ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಾಮಾಜಿಕ ಕಳಕಳಿ ಇರುವ ಸ್ವಾವಲಂಬಿ ಯುವಜನರಾಗಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

ಪ್ರಸ್ತುತ ಡ್ರಗ್ಸ್ ಎಂಬುದು ಎಲ್ಲಾ ಕಾಲೇಜುಗಳಲ್ಲೂ ಅವರಿಸುತ್ತಿದೆ. ಹೆಣ್ಣು ಗಂಡು ಎಂಬ ಬೇಧವಿಲ್ಲದೆ ಎಲ್ಲರೂ ಅದಕ್ಕೆ ದಾಸರಗುತ್ತಿದ್ದಾರೆ. ಹೆಣ್ಣಾಗಲಿ ಗಂಡಾಗಲಿ ಈ ದುಶ್ಚಟಗಳಿಗೆ ಗುರಿಯಾಗದಂತೆ ನೋಡಿಕೊಂಡು ಡ್ರಗ್ಸ್ ಮುಕ್ತ ಕ್ಯಾಂಪಸ್ ಮಾಡಲು ಮುಂದಾಗಬೇಕು ಎಂದರು.

ಯುವಜನರಿಗೆ ಮಾದರಿಯಾಗಿರುವ ವಿವೇಕಾನಂದರ ದಿನದಂದು ಎಲ್ಲಾ ಯುವಜನರು ಅವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಒಳ್ಳೆಯ ಮಾರ್ಗದಲ್ಲಿ ನಡೆದು ಇತರರಿಗೆ ಮಾದರಿಯಾಗಬೇಕು ಎಂದು ಪ್ರೋತ್ಸಾಹದ ಮಾತುಗಳನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಕೆ. ನಾರಾಯಣ ಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ ಎಚ್.ಎಂ ಮಂಜುನಾಥ್, ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ ಅಬ್ದುಲ್ ರಹಿಮಾನ್ ಎಂ ಹಾಗೂ ಇತರರು ಉಪಸ್ಥಿತರಿದ್ದರು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago