ಮೈಸೂರು

ಮೈಸೂರನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯಿದೆ: ರಾಜವಂಶಸ್ಥ ಯದುವೀರ್‌

ಪಿರಿಯಾಪಟ್ಟಣ: ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯಿದೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು (ಮಾ.೧೬) ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೈಸೂರಿನ ರಾಜಮನೆತನದ ಹೆಸರಿನಲ್ಲಿ ಮೈಸೂರನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಅನೇಕ ಯೋಜನೆಗಳು ನನ್ನ ಮುಂದಿದ್ದು ನಿಮ್ಮೆಲ್ಲರ ಸಹಕಾರವಿದ್ದರೆ ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವುದಾಗಿ ಯದುವೀರ್‌ ಹೇಳಿದರು.

ನಾನು ರಾಜ ಮನೆತನದಿಂದ ಬಂದಿದ್ದರು ಸಹ ಜನಪ್ರತಿನಿಧಿಯಾಗಿ ಜನಸಾಮಾನ್ಯರ ಧ್ವನಿಯಾಗುವೆ, ಈ ಹಿಂದೆಯೂ ಸಹ ನಮ್ಮ ಮನೆತನದಿಂದ ರಾಜಕೀಯ ಪ್ರಕ್ರಿಯೆಗಳು ನಡೆದಿದ್ದು ಈ ಸಾರಿ ನಾನು ಸಹ ಲೋಕಸಭಾ ಅಭ್ಯರ್ಥಿಯಾಗಿ ಜನ ಸೇವೆಗೆ ಮುಂದಾಗಿದ್ದೇನೆ ಎಂದರು.

ನಾನು ಜನಪ್ರತಿನಿಧಿಯಾಗಿ ಮುಂದಿನ ಎಲ್ಲಾ ಸವಾಲುಗಳನ್ನು ಸ್ವೀಕರಿಸಿ ನಿಮ್ಮೆಲ್ಲರ ಸಹಕಾರದಿಂದ ಎದುರಿಸಲು ಸಿದ್ಧನಾಗಿದ್ದೇನೆ ಇದಕ್ಕೆ ನಿಮ್ಮೆಲ್ಲರ ಹಾಗೂ ಕಾರ್ಯಕರ್ತರ ಸಹಕಾರ ಅತ್ಯಗತ್ಯ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಚೆನ್ನಬಸವರಾಜ್, ಮಾಜಿ ಶಾಸಕ ರಾಮದಾಸ್, ಸ್ಥಳೀಯ ಮುಖಂಡರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago