ಮೈಸೂರು: ಇದುವರೆಗೆ ನಾನೂ ರಾಜಕಾರಣ ಕಲಿತಿರಲಿಲ್ಲ, ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ. ಅಭಿವೃದ್ಧಿ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಇದೇ ಕಾರಣಕ್ಕೆ ಜನರು ನನ್ನನ್ನು ಎರಡು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ಇವುಗಳ ಮಧ್ಯೆ ರಾಜಕಾರಣ ಇರುತ್ತದೆ ಎಂಬುದನ್ನು ಅರಿತುಕೊಳ್ಳುವಲ್ಲಿ ನಾನು ಸೋತಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜಕಾರಣಿಯಾಗಿ ನಾನು ಸೋತಿದ್ದೇನೆ ಆದರೆ ಸಂಸದನಾಗಿ ಸಕ್ಸಸ್ ಆಗಿದ್ದೇನೆ ಎಂದಿದ್ದಾರೆ. ರಾಜಕಾರಣಿಯಾದವರು ಕೇವಲ ಚುನಾವಣೆ ಟಿಕೆಟ್‌ಗೋಸ್ಕರ ಹೋರಾಟ ಮಾಡಬಾರದು, ಅಭಿವೃದ್ಧಿ ಕೆಲಸಕ್ಕೂ ಹೋರಾಟ ಮಾಡಬೇಕು. ರಾಜಕಾರಣ ಅರಿತುಕೊಳ್ಳುವಲ್ಲಿ ಸೋತಿದ್ದೇನೆ, ಆದರೆ ಮುಂದೆ ರಾಜಕಾರಣ ಕಲಿಯುತ್ತೇನೆ ಎಂದರು.
ಎರಡು ಸಂಸದರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭೆ ಚುನಾವಣೆಯ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿದ್ದಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…