ಮೈಸೂರು

ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಮಹರ್ಷಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ತಂಡಕ್ಕೆ ಬಹುಮಾನ

ಮೈಸೂರು : ನಿನ್ನೆ ( ಜುಲೈ 10 ) ಯೂತ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಆಲ್ ಸ್ಟಾರ್ಸ್ ಬ್ಯಾಸ್ಕೆಟ್ ಬಾಲ್ ಆಶ್ರಯದಲ್ಲಿ ನಡೆದ ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ವಿದ್ಯಾಸಂಸ್ಥೆಯ ಮಕ್ಕಳ ತಂಡಕ್ಕೆ ಪ್ರಥಮ ಬಹುಮಾನಗಳನ್ನು ಗಳಿಸಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಡಾ. ಭವಾನಿ ಶಂಕರ್ ರವರು ಶುಭ ಹಾರೈಸಿದರು.

ಬಳಿಕ ಮಾತನಾಡಿದ ಭವಾನಿ ಶಂಕರ್‌ , ವಿದ್ಯಾರ್ಥಿಗಳು ಕ್ರೀಡಾಸಕ್ತಿ ಕಡೆ ಹೆಚ್ಚಿನ ಗಮನ ಹರಿಸಿದಾಗ ಮಾನಸಿಕ ಹಾಗೂ ದೈಹಿಕ ಚೈತನ್ಯ ಹೆಚ್ಚಾಗುತ್ತದೆ. ಇದರಿಂದ ಅವರ ವ್ಯಾಸಂಗಕ್ಕೂ ಹೊಸ ಹೊರುಪು ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ಹಾಗೂ ಆರೋಗ್ಯವೇ ವಿದ್ಯಾರ್ಥಿಗಳ ಗೆಲುವಿನ ಮೆಟ್ಟಿಲು. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನ ಬೆಳೆಸಿಕೊಂಡರೆ, ಜೀವನದ ಜಟಿಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಸಾಮಾರ್ಥ್ಯ ಹೆಚ್ಚುತ್ತದೆ ಎಂದರು

ಇದೇ ಸಂದರ್ಭದಲ್ಲಿ ಶಾಲೆಯ ಸಿಇಓ ತೇಜಸ್ ಶಂಕರ್, ಹಿರಿಯ ಪ್ರಾಚಾರ್ಯರಾದ ಗೋಪಾಲಸ್ವಾಮಿ ,ಪ್ರಾಚಾರ್ಯರಾದ ವಿಜಯ ನರಸಿಂಹಮ್ ಹಾಗೂ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

36 mins ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

6 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

7 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

7 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

7 hours ago