ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ, ಸಂಗೀತ ಸಾಮ್ರಾಟ್ ಎಂದೇ ಪ್ರಖ್ಯಾತಿ ಪಡೆದಿರುವ ಹಂಸಲೇಖ ಅವರು ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಮೈಸೂರು ದಸಾರಗೆ ಇನ್ನು ಒಂದೂವರೆ ತಿಂಗಳಷ್ಟೇ ಬಾಕಿ ಇದ್ದು. ದಸರಾ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಸರಾ ಸಭೆ ಕೂಡ ಬೆಂಗಳೂರಿನಲ್ಲಿ ನಡೆದಿತ್ತು.
ಈಗಾಗಲೇ ದಸರಾಗೆ ಸಂಬಂಧಪಟ್ಟ ಚಟುವಟಿಕೆಗಳು ಆರಂಭವಾಗಿದ್ದು, ಸೆಪ್ಟಂಬರ್ 1 ನೇ ತಾರೀಖು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಮೊದಲ ಹಂತದ ದಸರಾ ಗಜಪಡೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ.





