Mysore
33
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಮೈಸೂರು ದಸರಾ ಉದ್ಘಾಟನೆ: ಹಂಪ ನಾಗರಾಜ್‌ಗೆ ಅಧಿಕೃತ ಆಹ್ವಾನ

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ, ಸಂಶೋಧಕ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.

ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಜಿಲ್ಲಾಡಳಿತ ಅಧಿಕಾರಿಗಳು ಆಗಮಿಸಿ ಆಹ್ವಾನ ನೀಡಿದರು. ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ‌ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು.

Tags:
error: Content is protected !!