Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಪಿರಿಯಾಪಟ್ಟಣ| ಸಿನಿಮಿಯಾ ಸ್ಟೈಲ್‌ನಲ್ಲಿ ಉರುಳಿ ಬಿದ್ದ ಲಾರಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

lorry skidding

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೊಬ್ಬರ ತುಂಬಿಕೊಂಡು ಮೈಸೂರಿನಿಂದ ಮಡಿಕೇರಿಗೆ ಹೋಗುತ್ತಿದ್ದ TN 28 BA5853 ನಂಬರಿನ ಲಾರಿ ಇದಾಗಿದ್ದು, ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವೇಗವಾಗಿ ಬರುತ್ತಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ:- ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಎರಡನೇ ಬಲಿ

ಅದೃಷ್ಟವಶಾತ್‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!