lorry skidding
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್ ಆಗಿ ಉರುಳಿಬಿದ್ದ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೊಬ್ಬರ ತುಂಬಿಕೊಂಡು ಮೈಸೂರಿನಿಂದ ಮಡಿಕೇರಿಗೆ ಹೋಗುತ್ತಿದ್ದ TN 28 BA5853 ನಂಬರಿನ ಲಾರಿ ಇದಾಗಿದ್ದು, ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವೇಗವಾಗಿ ಬರುತ್ತಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:- ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಎರಡನೇ ಬಲಿ
ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…