ಬೆಂಗಳೂರು/ಮೈಸೂರು: ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ರಾಜ್ಯಾದ್ಯಂತ 30ಕ್ಕೂ ಅಧಿಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30ಕ್ಕೂ ಅಧಿಕ ಸ್ಥಳಗಳಲ್ಲಿ ಉದ್ಯಮಿ, ಬಿಲ್ಡರ್‌ಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶಿಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಮೈಸೂರಿನಲ್ಲಿ ಕಂಟ್ರಾಕ್ಟರ್, ಇಟ್ಟಿಗೆ ಫ್ಯಾಕ್ಟರಿ ವ್ಯವಹಾರ ಮಾಡುತ್ತಿದ್ದ ರಾಮಕೃಷ್ಣ ಎಂಬುವವರ ನಿವಾಸ ಮತ್ತು ಕಚೇರಿಯ ಮೇಲೆ ಐಟಿ ದಾಳಿ ನಡೆಸಿದೆ. ಅಲ್ಲದೇ ರಾಮಕೃಷ್ಣ ನಗರದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಮೂರು ಕಾರಿನಲ್ಲಿ 10ಕ್ಕೂ ಅಧಿಕಾರಿಗಳು ಬಂದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.