ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿ ಕಬಿನಿ ಜಲಾಶಯವಿದ್ದು, ಸಮುದ್ರ ಮಟ್ಟದಿಂದ 2284 ಅಡಿ ಎತ್ತರವಿದ್ದು, ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2280.51 ಅಡಿಗಳಿಗೆ ಏರಿಕೆಯಾಗಿದ್ದು, ಕಬಿನಿ ಜಲಾಶಯದ ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. ಜಲಾಶಯದ ಹೊರ ಹರಿವು 11250 ಕ್ಯೂಸೆಕ್ ಇದೆ. ಒಟ್ಟು ಕಬಿನಿ ಜಲಾಶಯದಲ್ಲಿ 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಜಲಾಶಯದಲ್ಲಿಂದು 17.34 ಟಿಎಂಸಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ಕಪಿಲಾ ನದಿಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…