ಮೈಸೂರು

ಚಾಮುಂಡಿಬೆಟ್ಟಕ್ಕೆ ವಿಐಪಿಗಳ ಸಂಖ್ಯೆ ಹೆಚ್ಚಳ : ಧರ್ಮದರ್ಶನಕ್ಕೆ ತೊಡಕು

ಮೈಸೂರು : ಮೂರನೇ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ನಾವು ಸಚಿವರು, ಶಾಸಕರ ಕಡೆಯವರೆಂದು ಹೇಳಿಕೊಂಡು ಶಿಫಾರಸ್ಸು ಪತ್ರ ತಂದವರೇ ಹೆಚ್ಚಾಗಿದ್ದರು. ಇದರಿಂದ ವಿಐಪಿಗಳ ಸರತಿ ಸಾಲು ಮಾರುದ್ದ ಇತ್ತು.

ದೇವಾಲಯದ ಗರ್ಭಗುಡಿಗೆ ತೆರಳಲೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದರಿಂದ ಧರ್ಮ ದರ್ಶನಕ್ಕೆ ಮಂಜಾನೆಯಿಂದಲೇ ಸರತಿ ಸಾಲಿನಲ್ಲಿ ಬಂದಿದ್ದವರಿಗೆ ಸಮಸ್ಯೆಯಾಯಿತು. ಭಕ್ತರೊಂದಿಗೆ ವಿಐಪಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಜಿಲ್ಲಾಡಳಿತ ಈ ಬಾರಿ ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲವೆಂದು ಹೇಳಿತ್ತು.

ಆದರೆ, ಹೇಳಿದ್ದೇ ಒಂದು ಮಾಡಿದ್ದೇ ಒಂದು ಎಂಬಂತಿತ್ತು ಬೆಟ್ಟದಲ್ಲಿನ ಪರಿಸ್ಥಿತಿ. ಧರ್ಮದರ್ಶನದಲ್ಲಿ ದರ್ಶನಕ್ಕೆ ನಿಂತಿದ್ದ ಮಹಿಳೆಯರು ವಿವಿಐಪಿಗಳನ್ನು ಒಳಗೆ ಕಳುಹಿಸುತ್ತಿದ್ದಕ್ಕೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಪೊಲೀಸ್‌ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿತ್ರ ನಟ ಶಶಿಕುಮಾರ್‌, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಗ್ಯಾರಂಟಿ ಯೋಜನೆ ಉಪಧ್ಯಾಕ್ಷ ಹೆಚ್.ಎಂ ರೇವಣ್ಣ, ಸಂಸದ ರಾಘವೇಂದ್ರ, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್‌ ಶಾಸಕ ಎ.ಮಂಜು ಸೇರಿದಂತೆ ಅನೇಕ ವಿಐಪಿಗಳು ಕುಟುಂಬ ಸಮೇತ ದರ್ಶನ ಪಡೆದರು.

ಮೂರನೇ ಆಷಾಢಮಾಸದ ಶುಕ್ರವಾರದಂದು ಚಾಮುಂಡೇಶ್ವರಿ ಬಿಳಿ, ನೇರಳೆ ಬಣ್ಣದ ಸೀರೆಯುಟ್ಟು ವಿಶೇಷ ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago