ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಮೈಸೂರು ಭಾಗದಲ್ಲಿ ಮಾನವ- ಹುಲಿ,ಆನೆ ಸಂಘರ್ಷಗ ಬಗ್ಗೆ ಗಂಭೀರ ಚರ್ಚೆ ನಡೆಸಿದರು.
ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಹೀಗಿದೆ….
1. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು
2. ಲಾಂಟೆನಾ ತೆಗೆಸಬೇಕು
3. ಅರಣ್ಯದಲ್ಲಿ ಮೇವು ಬೆಳೆಸಬೇಕು
4. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು
ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ
ಜೊತೆಗೆ ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿಗಳು, ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ : ಸಿ.ಎಂ ಸೂಚನೆ
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎಂದು ಸೂಚನೆ ನೀಡಿದರು.
ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲ: ಅನಿಲ್ ಚಿಕ್ಕಮಾದು
ಸಿಎಂ ಮಾನವ-ಹುಲಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಾಗ, ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…