ಮೈಸೂರು

ಹೆಚ್ಚಿದ ಮಾನವ-ಹುಲಿ ಸಂಘರ್ಷ : ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಏನು..?

ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ‌ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಮೈಸೂರು ಭಾಗದಲ್ಲಿ ಮಾನವ- ಹುಲಿ,ಆನೆ ಸಂಘರ್ಷಗ ಬಗ್ಗೆ ಗಂಭೀರ ಚರ್ಚೆ ನಡೆಸಿದರು.

ಅರಣ್ಯಾಧಿಕಾರಿಗಳಿಗೆ ಸಿಎಂ ಕೊಟ್ಟ ಸಲಹೆ ಹೀಗಿದೆ….

1. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು
2. ಲಾಂಟೆನಾ ತೆಗೆಸಬೇಕು
3. ಅರಣ್ಯದಲ್ಲಿ ಮೇವು ಬೆಳೆಸಬೇಕು
4. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು

ಇದನ್ನು ಓದಿ: ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಜೊತೆಗೆ ಅರಣ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಪ್ರತ್ಯೇಕವಾದ ಸಭೆ ಕರೆಯುತ್ತಿದ್ದೇವೆ. ಸಮಗ್ರ ಮಾಹಿತಿ ಮತ್ತು ಪರಿಹಾರದ ಬಗ್ಗೆ ಅಧ್ಯಯನ‌ ನಡೆಸಿ ಪೂರ್ತಿ ಸಿದ್ಧತೆಯೊಂದಿಗೆ ಸಭೆಗೆ ಬರಬೇಕು ಎಂದು ಸಿಎಂ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಅರಣ್ಯಾಧಿಕಾರಿಗಳು, ಈಗಾಗಲೇ ಹೆಲ್ಪ್ ಲೈನ್ ತೆರೆಯಲಾಗಿದೆ. ಕಮಾಂಡ್ ಸೆಂಟರ್ ತೆರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ : ಸಿ.ಎಂ ಸೂಚನೆ
ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎಂದು ಸೂಚನೆ ನೀಡಿದರು.

ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲ: ಅನಿಲ್ ಚಿಕ್ಕಮಾದು
ಸಿಎಂ ಮಾನವ-ಹುಲಿ ಸಂಘರ್ಷದ ಬಗ್ಗೆ ಚರ್ಚೆ ನಡೆಸುವಾಗ, ACF ಮತ್ತು RFO ಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಸಮಸ್ಯೆಗಳು ಹೆಚ್ಚಾಗಿವೆ ಎಂದು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ‌ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾವ ಜೀವ ಹಾನಿ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

3 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

9 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

30 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

38 mins ago

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 hours ago