ಮೈಸೂರು

ಹೆಚ್ಚುತ್ತಿರುವ ಹೃದಯಾಘಾತ : ಜನಸಾಮಾನ್ಯರಲ್ಲಿ ಇಮ್ಮಡಿಯಾದ ಆತಂಕ

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 48 ವರ್ಷದ ಸರ್ಕಾರಿ ವೈದ್ಯ ಡಾ. ಸಂದೀಪ್, ತುಮಕೂರಿನಲ್ಲಿ ಬಿಜೆಪಿ ಯುವಮೋರ್ಚಾದ ಮುಖಂಡ 36 ವರ್ಷದ ನೀಲಕಂಠಸ್ವಾಮಿ, ದಾವಣಗೆರೆಯಲ್ಲಿ 19 ವರ್ಷದ ಯುವತಿ ತರಕಾರಿ ಕತ್ತರಿಸುವಾಗಲೇ ಪಕ್ಕಕ್ಕೆ ವಾಲಿಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲಿ ಆರು ಮಂದಿ ಹೃದಯಾಘಾತಕ್ಕೆ ಒಳಗಾಗಿರುವ ವರದಿ ಇದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ-ಜೂನ್ ತಿಂಗಳಿನಲ್ಲಿ 14 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಈ ಎಲ್ಲಾ ಪ್ರಕರಣಗಳಲ್ಲೂ ಅಸ್ವಸ್ಥರಾದ ಕೆಲವೇ ನಿಮಿಷಗಳಲ್ಲಿ ಪ್ರಾಣವಾಯು ಹಾರಿಹೋಗಿರುವುದು, ಪ್ರಾಥಮಿಕ ಚಿಕಿತ್ಸೆಗೂ ಅವಕಾಶವಿಲ್ಲದಂತೆ ಸಾವಿನ ಸರಣಿಗಳಾಗುತ್ತಿರುವುದು ಆತಂಕ ಮೂಡಿಸಿದೆ.

ಆಸ್ಪತ್ರೆಗಳ ಮೇಲೆ ಹೆಚ್ಚಿದ ಒತ್ತಡ : ಅದರಲ್ಲೂ ಬಹುತೇಕ ಮಂದಿ ಚಿಕ್ಕ ವಯಸ್ಸಿನವರೇ ಸಾವನ್ನಪ್ಪುತ್ತಿದ್ದಾರೆ. ಯುವಕರು-ಯುವತಿಯರು ಎಂಬ ಬೇಧವಿಲ್ಲದೆ ಸರಣಿ ಸಾವುಗಳಾಗುತ್ತಿವೆ. ಇದರಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ.

ಜನತೆ ಸಣ್ಣಪುಟ್ಟ ಅಸ್ವಸ್ಥತೆಗಳಿಗೂ ತಪಾಸಣೆಗಾಗಿ ಹೃದ್ರೋಗ ತಜ್ಞರ ಬಳಿ ದಾಂಗುಡಿ ಇಡುತ್ತಿದ್ದಾರೆ. ಇದರಿಂದಾಗಿ ಬೆಂಗಳೂರು, ಮೈಸೂರು, ಕಲಬುರಗಿಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆಗೆ ಖಾಸಗಿ ಹೃದ್ರೋಗ ತಜ್ಞರ ಬಳಿಯೂ ತಪಾಸಣೆಗೊಳಗಾಗುತ್ತಿರುವ ಸಂಖ್ಯೆ ತೀವ್ರಗೊಂಡಿದೆ. ಸಾಮರ್ಥ್ಯ ಮೀರಿ ರೋಗಿಗಳು ಬರುತ್ತಿರುವುದರಿಂದ ತಪಾಸಣೆಗೆ ಒತ್ತಡ ಹೆಚ್ಚಾಗಿದೆ. ಸಾರ್ವಜನಿಕರು ಮೊದಲು ಸಾಮಾನ್ಯ ಪರೀಕ್ಷೆಗೆ ಒಳಗಾಗಿ ನಂತರ ಹೆಚ್ಚಿನ ಚಿಕಿತ್ಸೆಗೆ ತಜ್ಞರ ಬಳಿ ಹೋಗುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ದಿನಕ್ಕೆ 700 ರಿಂದ 1000 ಇಸಿಜಿಗಳಾಗುತ್ತಿದ್ದವು. ಇತ್ತೀಚೆಗೆ ಒಂದು ಸಾವಿರಕ್ಕೂ ಹೆಚ್ಚಿನ ಇಸಿಜಿ ಮಾಡಲಾಗುತ್ತಿದೆ. ಸುಮಾರು 2 ರಿಂದ 3 ಸಾವಿರ ಜನ ಕಾಲಾವಕಾಶ ಸಾಲದೇ ತೆರಳುತ್ತಿದ್ದಾರೆ ಎಂಬ ವರದಿಗಳಿವೆ.

ಸೌಲಭ್ಯಗಳ ಕೊರತೆ : ಹೃದಯಾಘಾತ ಎಂಬುದು ಸಮಯವಕಾಶವನ್ನೇ ನೀಡದೇ ಜೀವಹತ್ಯೆ ಮಾಡುತ್ತಿದ್ದು, ಬಹಳಷ್ಟು ಪ್ರಕರಣಗಳಲ್ಲಿ ತತ್‍ಕ್ಷಣಕ್ಕೆ ಸೂಕ್ತ ಚಿಕಿತ್ಸೆ ಪಡೆಯದೆ ಸಾವುಗಳಾಗಿವೆ. ಆಂಬುಲೆನ್ಸ್ ಸೇವೆ ಹಾಗೂ ಪ್ರಾಥಮಿಕ ಚಿಕಿತ್ಸೆಯ ಕೊರತೆ ಬಹಳಷ್ಟು ಪ್ರಕರಣಗಳಲ್ಲಿ ಕಂಡುಬಂದಿದೆ.‌

ರಾಜ್ಯಸರ್ಕಾರ ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆಯನ್ನು ಆರಂಭಿಸಿದೆ. ಇದು ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ಅನುಕೂಲವಾಗುವಂತಹ ಸಲಕರಣೆಗಳನ್ನು ಒದಗಿಸುವ ಮೂಲ ಉದ್ದೇಶ ಹೊಂದಿದೆ. ಆದರೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದಿರುವ ಬಗ್ಗೆ ಅನುಮಾನಗಳಿವೆ.

ಆಂದೋಲನ ಡೆಸ್ಕ್

Recent Posts

ವಾಣಿಜ್ಯ ಗ್ಯಾಸ್ ಕೊರತೆ; ತರಕಾರಿ ಬೆಲೆ ಕುಸಿತ

ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ…

1 min ago

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

10 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

11 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

11 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

11 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

12 hours ago