Increasing heart attacks: A growing concern among the common people
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.
ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.
ಹಾವೇರಿ ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ 48 ವರ್ಷದ ಸರ್ಕಾರಿ ವೈದ್ಯ ಡಾ. ಸಂದೀಪ್, ತುಮಕೂರಿನಲ್ಲಿ ಬಿಜೆಪಿ ಯುವಮೋರ್ಚಾದ ಮುಖಂಡ 36 ವರ್ಷದ ನೀಲಕಂಠಸ್ವಾಮಿ, ದಾವಣಗೆರೆಯಲ್ಲಿ 19 ವರ್ಷದ ಯುವತಿ ತರಕಾರಿ ಕತ್ತರಿಸುವಾಗಲೇ ಪಕ್ಕಕ್ಕೆ ವಾಲಿಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಅಲ್ಪಾವಧಿಯಲ್ಲಿ ಆರು ಮಂದಿ ಹೃದಯಾಘಾತಕ್ಕೆ ಒಳಗಾಗಿರುವ ವರದಿ ಇದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ-ಜೂನ್ ತಿಂಗಳಿನಲ್ಲಿ 14 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಈ ಎಲ್ಲಾ ಪ್ರಕರಣಗಳಲ್ಲೂ ಅಸ್ವಸ್ಥರಾದ ಕೆಲವೇ ನಿಮಿಷಗಳಲ್ಲಿ ಪ್ರಾಣವಾಯು ಹಾರಿಹೋಗಿರುವುದು, ಪ್ರಾಥಮಿಕ ಚಿಕಿತ್ಸೆಗೂ ಅವಕಾಶವಿಲ್ಲದಂತೆ ಸಾವಿನ ಸರಣಿಗಳಾಗುತ್ತಿರುವುದು ಆತಂಕ ಮೂಡಿಸಿದೆ.
ಆಸ್ಪತ್ರೆಗಳ ಮೇಲೆ ಹೆಚ್ಚಿದ ಒತ್ತಡ : ಅದರಲ್ಲೂ ಬಹುತೇಕ ಮಂದಿ ಚಿಕ್ಕ ವಯಸ್ಸಿನವರೇ ಸಾವನ್ನಪ್ಪುತ್ತಿದ್ದಾರೆ. ಯುವಕರು-ಯುವತಿಯರು ಎಂಬ ಬೇಧವಿಲ್ಲದೆ ಸರಣಿ ಸಾವುಗಳಾಗುತ್ತಿವೆ. ಇದರಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ.
ಜನತೆ ಸಣ್ಣಪುಟ್ಟ ಅಸ್ವಸ್ಥತೆಗಳಿಗೂ ತಪಾಸಣೆಗಾಗಿ ಹೃದ್ರೋಗ ತಜ್ಞರ ಬಳಿ ದಾಂಗುಡಿ ಇಡುತ್ತಿದ್ದಾರೆ. ಇದರಿಂದಾಗಿ ಬೆಂಗಳೂರು, ಮೈಸೂರು, ಕಲಬುರಗಿಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆಗೆ ಖಾಸಗಿ ಹೃದ್ರೋಗ ತಜ್ಞರ ಬಳಿಯೂ ತಪಾಸಣೆಗೊಳಗಾಗುತ್ತಿರುವ ಸಂಖ್ಯೆ ತೀವ್ರಗೊಂಡಿದೆ. ಸಾಮರ್ಥ್ಯ ಮೀರಿ ರೋಗಿಗಳು ಬರುತ್ತಿರುವುದರಿಂದ ತಪಾಸಣೆಗೆ ಒತ್ತಡ ಹೆಚ್ಚಾಗಿದೆ. ಸಾರ್ವಜನಿಕರು ಮೊದಲು ಸಾಮಾನ್ಯ ಪರೀಕ್ಷೆಗೆ ಒಳಗಾಗಿ ನಂತರ ಹೆಚ್ಚಿನ ಚಿಕಿತ್ಸೆಗೆ ತಜ್ಞರ ಬಳಿ ಹೋಗುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ದಿನಕ್ಕೆ 700 ರಿಂದ 1000 ಇಸಿಜಿಗಳಾಗುತ್ತಿದ್ದವು. ಇತ್ತೀಚೆಗೆ ಒಂದು ಸಾವಿರಕ್ಕೂ ಹೆಚ್ಚಿನ ಇಸಿಜಿ ಮಾಡಲಾಗುತ್ತಿದೆ. ಸುಮಾರು 2 ರಿಂದ 3 ಸಾವಿರ ಜನ ಕಾಲಾವಕಾಶ ಸಾಲದೇ ತೆರಳುತ್ತಿದ್ದಾರೆ ಎಂಬ ವರದಿಗಳಿವೆ.
ಸೌಲಭ್ಯಗಳ ಕೊರತೆ : ಹೃದಯಾಘಾತ ಎಂಬುದು ಸಮಯವಕಾಶವನ್ನೇ ನೀಡದೇ ಜೀವಹತ್ಯೆ ಮಾಡುತ್ತಿದ್ದು, ಬಹಳಷ್ಟು ಪ್ರಕರಣಗಳಲ್ಲಿ ತತ್‍ಕ್ಷಣಕ್ಕೆ ಸೂಕ್ತ ಚಿಕಿತ್ಸೆ ಪಡೆಯದೆ ಸಾವುಗಳಾಗಿವೆ. ಆಂಬುಲೆನ್ಸ್ ಸೇವೆ ಹಾಗೂ ಪ್ರಾಥಮಿಕ ಚಿಕಿತ್ಸೆಯ ಕೊರತೆ ಬಹಳಷ್ಟು ಪ್ರಕರಣಗಳಲ್ಲಿ ಕಂಡುಬಂದಿದೆ.
ರಾಜ್ಯಸರ್ಕಾರ ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆಯನ್ನು ಆರಂಭಿಸಿದೆ. ಇದು ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ಅನುಕೂಲವಾಗುವಂತಹ ಸಲಕರಣೆಗಳನ್ನು ಒದಗಿಸುವ ಮೂಲ ಉದ್ದೇಶ ಹೊಂದಿದೆ. ಆದರೆ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದಿರುವ ಬಗ್ಗೆ ಅನುಮಾನಗಳಿವೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…