ಮೈಸೂರು

ಹೆಚ್ಚುತ್ತಿರುವ ಹೃದಯಾಘಾತ : ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಯುವ ಸಮೂಹ

ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ.

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಸಾರ್ವಜನಿಕರು ಮುಂಜಾನೆಯೆಯಿಂದಲೇ ಆಸ್ಪತ್ರೆಯ ಓಪಿಡಿಗೆ ಬಂದಿದ್ದಾರೆ. ಜನ ನಿಯಂತ್ರಣ ಮಾಡಲಾಗದೆ ಆಸ್ಪತ್ರೆ ಸಿಬ್ಬಂದಿ ಬ್ಯಾರಿಕೇಡ್ ಸಿಸ್ಟಮ್‌ ಮಾಡಿದ್ದಾರೆ. ಸರತಿ ಸಾಲಲ್ಲಿ ನಿಂತಿರುವ ಸಾರ್ವಜನಿಕರಲ್ಲಿ ಯುವಕ ಯುವತಿಯರ ಸಂಖ್ಯೆಯೇ ಗಣನೀಯವಾಗಿದೆ.

ಈ ಹಿಂದೆ ನಿತ್ಯ 500ರಷ್ಟು ಬರುತ್ತಿದ್ದ ಸಾರ್ವಜನಿಕರ ಸಂಖ್ಯೆ ದಿಢೀರ್ 1,500ಕ್ಕೂ ಅಧಿಕ ಸಂಖ್ಯೆಗೆ ಏರಿಕೆಯಾಗಿದ್ದು, ಬಂದಿರುವವರಲ್ಲಿ ಮೊದಲ ಬಾರಿ ಬಂದಿರುವವರ ಸಂಖ್ಯೆಯೇ ಅಧಿಕವಾಗಿದೆ ಎನ್ನುತ್ತದೆ ಆಸ್ಪತ್ರೆ ಆಡಳಿತ ಮಂಡಳಿ.

ಜನ ಪ್ಯಾನಿಕ್ ಆಗಿ ಸಣ್ಣ ನೋವು ಬಂದ್ರೂ ಆಸ್ಪತ್ರೆಗೆ ಬರ್ತಿದ್ದಾರೆ. ಆದ್ರೆ ಹೃದಯ ಸಮಸ್ಯೆಯಿಂದ ಬರುತ್ತಿರುವವರು ಕಡಿಮೆ, ಮಾನಸಿಕ ಒತ್ತಡ, ಸಾಲದ ಸಮಸ್ಯೆ, ನಿರುದ್ಯೋಗ, ಜಂಕ್ ಫುಡ್ ಸೇರಿ ಹಲವು ಸಮಸ್ಯೆಗಳಿಂದ ಹೃದಯಾಘಾತ ಸಂಭವಿಸುತ್ತದೆ. ಜನ ಪ್ಯಾನಿಕ್ ಆಗಬೇಡಿ, ಸುಸ್ತು, ಬೆವರುವಿಕೆ,ಎದೆನೋವು ಇದ್ದಾಗ ಮಾತ್ರ ಆಸ್ಪತ್ರೆಗೆ ಬನ್ನಿ, ಅತಿ ಹೆಚ್ಚು ರೋಗಿಗಳಿಂದಲೂ ಆಸ್ಪತ್ರೆ ಮೇಲೆ ಒತ್ತಡ ಇದೆ. ಜನ ಗಾಬರಿಯಾಗೊದು ಬೇಡ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ.ದಿನೇಶ್ ಸಲಹೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

29 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

43 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

7 hours ago