ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ.
ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದಿಂದ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ನಂಜನಗೂಡು ನಗರದ ತಗ್ಗು ಪ್ರದೇಶದ ಬಡವಾಣೆ ಸೇರಿದಂತೆ ತಾಲೂಕಿನ ಹುಲ್ಲಹಳ್ಳಿ, ಬೊಕ್ಕಹಳ್ಳಿ, ಕುಳ್ಳಂಕನಹುಂಡಿ ಸೇರಿದಂತೆ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಶುರುವಾಗಿದೆ.
ಮಳೆಯ ಆರ್ಭಟ ಹೆಚ್ಚಾದಲ್ಲಿ ನೀರಿನ ಹೊರ ಹರಿವೂ ಕೂಡ ಹೆಚ್ಚಳವಾಗಲಿದೆ. ಜಲಾಶಯದಿಂದ ಹೊರ ಬಿಡುವ ನೀರಿನ ಪ್ರಮಾಣ ೫೦ ಸಾವಿರ ಕ್ಯೂಸೆಕ್ ತಲುಪಿದ್ದೆ ಆದಲ್ಲಿ ನಂಜನಗೂಡಿನಲ್ಲಿ ಪ್ರವಾಹ ಭೀತಿ ಎದುರಾಗಲಿದೆ. ಈಗಾಗಲೇ ಸುತ್ತೂರು, ನಗರ್ಲೆ, ಹುಲ್ಲಹಳ್ಳಿ, ಕುಳ್ಳಂಕನಹುಂಡಿ ಗ್ರಾಮಗಳ ನದಿ ತೀರದಲ್ಲಿರುವ ತಗ್ಗು ಪ್ರದೇಶದ ಜನರಿಗೆ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಮತ್ತು ಜಾನುವಾರುಗಳನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…