ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣಗೊಂಡಿರುವ ರೆಸಾರ್ಟ್‌ಗಳು, ಕಟ್ಟಡಗಳನ್ನು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ತೆರವು ಗೊಳಿಸುವಂತೆ ಒತ್ತಾಯಿಸಿ ಸೇವ್ ಕಬಿನಿ ಮತ್ತು ರೈತ ಸಂಘಟನೆಗಳು ನಡೆಸುತ್ತಿದ್ದ ಅನಿರ್ದಿಷ್ಟ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಭರವಸೆಯ ಮೇರೆಗೆ ಅಂತ್ಯಗೊಳಿಸಲಾಗಿದೆ.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ರೈತ ಸಂಘಟನೆಗಳು, ರೈತ ಮುಖಂಡರು ವನ್ಯಜೀವಿ ಪರಿಸರ ಪ್ರೇಮಿಗಳು ಸೇವ್ ಕಬಿನಿ ಹೆಸರಿನಲ್ಲಿ ಮಂಗಳವಾರದಿಂದ ಅನಿರ್ದಿಷ್ಟ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಈ ವಿಚಾರ ತಿಳಿದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಕೋಟೆ ತಹಸಿಲ್ದಾರ್ ಶ್ರೀನಿವಾಸ್ ಅವರಿಗೆ ದೂರವಾಣಿ ಕರೆ ಮಾಡಿ, ರೈತರು ಪ್ರತಿಭಟನೆಯನ್ನು ಕೈಬಿಡಬೇಕು. ಒಂದು ತಿಂಗಳ ಒಳಗಾಗಿ ರೆಸಾರ್ಟ್‌ಗಳ ವರದಿಗಳನ್ನು ಪಡೆದು ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುವಂತೆ ಸೂಚಿಸಿದರು.
ಸಂಜೆ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸಿಲ್ದಾರ್ ಜಿಲ್ಲಾಧಿಕಾರಿಗಳು ನೀಡಿದ್ದ ಭರವಸೆಯನ್ನು ತಿಳಿಸಿದಾಗ ಪ್ರತಿಭಟನಾಕಾರರು ಜಿಲ್ಲಾಧಿಕಾರಿಯವರಿಗೆ ದೂರವಾಣಿಯಲ್ಲಿ ಮಾತನಾಡಿ, ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳದೆ ಇದ್ದರೆ ಮುಂದಿನ ತಿಂಗಳು ಜಿಲ್ಲಾಧಿಕಾರಿ ಕಚೇರಿ ಅಥವಾ ಕೋಟೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟರು.
ಪ್ರತಿಭಟನೆಯಲ್ಲಿ ಸೇವ್ ಕಬಿನಿ ತಂಡದ ವಕೀಲ ರವಿಕುಮಾರ್, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಂಜು ಕಿರಣ್, ರವಿಕುಮಾರ್, ಜಕ್ಕಳ್ಳಿ ಮಹೇಂದ್ರ, ನಾಗರಾಜು, ಪಳಿನಿ ಸ್ವಾಮಿ, ಕಾಶಿಪತಿ, ಜಗದೀಶ್, ಗುರುಪ್ರಸಾದ್, ಶಿವಶಂಕರ್, ಮಧು, ದೊರೆಸ್ವಾಮಿ, ಶಿವಲಿಂಗಪ್ಪ, ಹೊ.ಕೆ.ಮಹೇಂದ್ರ, ಗೋವಿಂದೇಗೌಡ, ಜೆ.ಪಿ.ನಾಗರಾಜ್, ಪರಮೇಶ್, ರವಿಕುಮಾರ್, ಭಾನುಮೋಹನ್, ಕುಮಾರಸ್ವಾಮಿ, ಸತೀಶ, ರಾಜೇಶ, ಸುನಿಲ್, ದಾಸೇಗೌಡ, ಕಬಿನಿ ಶಿವಲಿಂಗ, ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ರಾಜೇಶ್, ಇತರರು ಹಾಜರಿದ್ದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…