ಮೈಸೂರು

ಸ್ವಾತಂತ್ರ್ಯೋತ್ಸವ 78 : ಪಂಜಿನ ಕವಾಯತು ಮೈದಾನದಲ್ಲಿ ಗರಿಗೆದರಿದ ಸಂಭ್ರಮ

ಮೈಸೂರು: ಭಾರತವು ಆಗಸ್ಟ್‌ 15 ಗುರುವಾರದಂದು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಸಜ್ಜಾಗಿದೆ. ಈ ದಿನವನ್ನು ರಾಷ್ಟ್ರದ ಇತಿಹಾಸದ ಮೈಲಿಗಲ್ಲು ಎಂದು ಗುರುತಿಸಲಾಗುತ್ತದೆ.

ನೂರಾರು ವರ್ಷಗಳ ಕಾಲ ಪರಕೀಯರ ಕಬಂಧ ಬಾಹುಗಳಲ್ಲಿ ಬಂಧಿಯಾಗಿದ್ದ ದೇಶ ತನ್ನ ವೀರಾಗ್ರಣಿ ಮಕ್ಕಳ ತ್ಯಾಗ ಬಲಿದಾನಗಳ ಫಲವಾಗಿ ಪರಂಗಿಗಳನ್ನ ಈ ನೆಲದಿಂದ ಶಾಶ್ವತವಾಗಿ ಹೊರದಬ್ಬಿ, ಸ್ವಾತಂತ್ರ್ಯಗೊಂಡು ನಮ್ಮದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಪ್ರತಿ ವರ್ಷ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ನೆನೆದು ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ.

ಹಿಂಸಾ, ಅಹಿಂಸಾ ಎರಡರ ಸಮ್ಮಿಶ್ರಣದ ಧರ್ಮಬೇಧ, ಜಾತಿಬೇಧ, ಲಿಂಗಬೇಧವಿಲ್ಲದೇ, ಸರ್ವ ವಯೋಮಾನದವರು ಸ್ವಾತಂತ್ರ್ಯ ಪಡೆಯುವುದೊಂದೇ ಪರಮಗುರಿ ಎಂಬ ಒಂದು ಸಾಲಿನ ಧ್ಯೇಯ ವಾಕ್ಯದ ಹೋರಾಟದ ಫಲವೇ ಇಂದು ನಾವೆಲ್ಲಾ ಸ್ವಚ್ಚಂದದೊಂದಿಗೆ ಅನುಭವಿಸುತ್ತಿರುವ ಸ್ವಾತಂತ್ರ್ಯವಾಗಿದೆ.

ಈ ಹಿನ್ನೆಲೆ, ಮೈಸೂರು ಜಿಲ್ಲಾಡಳಿತ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಯೋಜಿಸಿದ್ದು, ನಗರದ ಪಂಜಿನ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಧ್ವಜಾರೋಹಣ ಮಾಡಲಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹಾಗೂ ವಿಧಾನ ಪರಿಷತ್ ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಡಾ.ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್ ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಿಗಮ ಮಂಡಳಿಗಳ ಅಧ್ಯಕ್ಷರುಗಳಾದ, ಕೆ.ಮರೀಗೌಡ, ಅಧ್ಯಕ್ಷರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಅಯೂಬ್ ಖಾನ್,ಅಧ್ಯಕ್ಷರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಹಾಗೂ ಮರಿಸ್ವಾಮಿ ಅಧ್ಯಕ್ಷರು ಅಚ್ಚುಕಟ್ಟು ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆ ಮೈಸೂರು ಇವರುಗಳು ಪಾಲ್ಗೊಳ್ಳಲಿದ್ದಾರೆ.   ಭಾರತಾಂಬೆಯ ಮಕ್ಕಳಾದ ನಾವು ತಾಯಿಗೆ  ನಮಿಸುತ್ತ 78 ನೇ ಸ್ವಾತಂತ್ರ್ಯ ಹಬ್ಬದಲ್ಲಿ ಭಾಗಿಯಾಗೋಣ.

ಸಂಜೆ 5 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ವರ್ಷ ಸರ್ಕಾರವು ಹರ್‌ಘರ್‌ ತಿರಂಗಾ ಅಭಿಯಾನ್‌ ಮೂಲಕ ಸಾರ್ವಜನಿಕ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತಿದೆ. ನಾಗರಿಕರು ತಮ್ಮ ಮನೆ ಮತ್ತು ವ್ಯವಹಾರ ಸ್ಥಳಗಳಲ್ಲಿ ಹೆಮ್ಮೆಯಿಂದ ರಾಷ್ಟ್ರಧ್ವಜವನ್ನು ಪ್ರದರ್ಶಿಸಲು ಒತ್ತಾಯಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

16 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

17 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

1 day ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 day ago