Mysore
24
clear sky

Social Media

ಗುರುವಾರ, 22 ಜನವರಿ 2026
Light
Dark

ಸ್ವಾತಂತ್ರ್ಯ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ

mahadevappa

ಮೈಸೂರು : 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಸಚಿವ ಮಹದೇವಪ್ಪ ನಗರದ ಪಂಜಿನ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ವಿವಿಧ 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹ ರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು.

ಲಿಟ್ಲ್ ಜಮ್ಸ್ ಶಾಲೆಯ ಮಕ್ಕಳಿಂದ ನಾವೆಲ್ಲರೂ ಒಂದೇ ಎಂಬ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು. 12 ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಂದ ಏರೋ ಬ್ರಿಕ್ಸ್ ನೃತ್ಯ ಪ್ರದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Tags:
error: Content is protected !!