ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್‌ಖಾನ್ ಅವರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗುರುತಿಸದೆ ರಾಜರನ್ನು ಅಥವಾ ಚಲನಚಿತ್ರ ನಟರನ್ನು ಗುರುತಿಸಿ ಅವರಿಗೆ ಟಿಕೆಟ್ ನೀಡಿ ಪ್ರಜೆಗಳಲ್ಲಿ ಮತ ಕೇಳಿದರೆ, ಪ್ರಜೆಗಳು ಮತಗಳನ್ನು ಏಕೆ ಕೊಡಬೇಕೆಂದು ಬಿಜೆಪಿ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.
ರಾಜರ ಮಹಾರಾಜರ ಮೇಲೆ ಅಪಾರ ಗೌರವವಿದ್ದು, ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಅವರ ಕೊಡುಗೆ ಏನು? ಬಿಜೆಪಿ ಒಕ್ಕಲಿಗರ ಕ್ಷೇತ್ರದ ಅನೇಕ ನಾಯಕರಿಗೆ ಟಿಕೆಟ್ ತಪ್ಪಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಾತ್ಯಾತೀತತೆ ಹಾಗೂ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡದೆ ಎಂ.ಲಕ್ಷಣ್ ಅವರಿಗೆ ಟಿಕೆಟ್ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷವೂ ರಾಜರಿಗೆ ಟಿಕೆಟ್ ನೀಡಿದೆ. ಯದುವೀರ್ ಅವರು ಏನು ಮಹಾತ್ಮ ಗಾಂಧಿಯವರ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯದುವೀರ್ ಅವರ ಸಮಾಜಕ್ಕೆ ಕೊಡುಗು ಏನು? ಬಿಜೆಪಿ ಪಕ್ಷವೂ ರಾಜರನ್ನು ಕರೆದು ಮತದಾರರಲ್ಲಿ ಮತ ಭಿಕ್ಷೆ ಕೇಳುವಂತೆ ರಾಜರನ್ನು ಬೀದಿಗೆ ತಂದಿದ್ದಾರೆ. ರಾಜರ ಮೇಲೆ ಗೌರವವಿದ್ದರೆ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಮಾಜ ಸೇವೆ ಮಾಡುವ ಗುಣವಂತ, ಹೋರಾಟಗಾರರಾದ ಎಂ.ಲಕ್ಷ್ಮಣ್ ಅವರಿಗೆ ದಯಮಾಡಿ ಮತದಾರರು ಮತ ನೀಡುವಂತೆ ಕೇಳಿದ್ದಾರೆ.
ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ನಗರ ಉಪಾಧ್ಯಕ್ಷ ಯೋಗೇಂದ್ರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…