ಮೈಸೂರು

ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ : ಡಾ. ಸುಧಾಕರ ಹೊಸಳ್ಳಿ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ನಮ್ಮನ್ನಷ್ಟೇ ಅಲ್ಲ, ಭಾರತಾಂಬೆಯನ್ನೇ ರಕ್ಷಣೆ ಮಾಡುತ್ತಿದೆ. ಈ ನೆಲ ಇರುವವರೆಗೂ ಸಂವಿಧಾನ ಶಾಶ್ವತವಾಗಿರುತ್ತದೆ. ಈ ದೇಶದ ಬಹತೇಕ ಜನರು ಆರಾಧಿಸುವ ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ.ಸುಧಾಕರ ಹೊಸಳ್ಳಿ ಅಭಿಪ್ರಾಯಪಟ್ಟರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯತೋತ್ಸವದ ಕಾರ್ಯಕ್ರಮವನ್ನು ನಗರದ ಕೃಷ್ಣಮೂರ್ತಿ ಪುರಂ ಬಳಿ ಇರುವ ಶಾರದಾ ವಿಲಾಸ ಕಾಲೇಜಿನ ಪ್ರೊ.ಚಿನ್ನಸ್ವಾಮಿ ಶೆಟ್ಟಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ಅದೊಂದು ಪುಸ್ತಕ ರೂಪದ ದಾಖಲೆ ಅಲ್ಲ ಅಥವಾ ಎರವಲು ಸಂವಿಧಾನವೂ ಅಲ್ಲ. ದೇಶದ ಜನರ ಬದುಕು ಮತ್ತು ಭವಿಷ್ಯವನ್ನು ನಿರ್ಧರಿಸುವ ಜೀವಂತ ಶಾಸನ. ನಮ್ಮ ಸಂವಿಧಾನದ ಬಗ್ಗೆ ಗೌರವ, ಆಸಕ್ತಿ ಮತ್ತು ಅಧಿಕೃತ ಮಾಹಿತಿಯನ್ನು ಈ ದೇಶದ ಯುವ ಜನರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂವಿಧಾನವನ್ನು ಅರ್ಥವಾಡಿಕೊಳ್ಳದೇ ರೂಪಿಸಲ್ಪಪಟ್ಟ ಅರ್ಥಶಾಸ್ತ್ರ ಮತ್ತು ಇತಿಹಾಸ ವ್ಯರ್ಥವಾಗಿ ಬಿಡುತ್ತದೆ. ಆದ್ದರಿಂದ ಪ್ರತಿಯೊಂದು ವಿಷಯದ ಪ್ರತಿಪಾದನೆಗೂ ಸಂವಿಧಾನವೇ ಅಡಿಪಾವಾಗಬೇಕು. ಅಂಬೇಡ್ಕರ್ ಅವರ ಕುರಿತಾಗಿ ಎಷ್ಟೋ ವಿಷಯಗಳು ಜನಸಾಮಾನ್ಯರಿಗೆ ತಲುಪಿಲ್ಲ . ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಯುವ ಜನತೆಯಿಂದ ಆಗಬೇಕು ಎಂದು ಹೇಳಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿಯೇ ಭಾರತದ ಅಸ್ಮಿತೆಯನ್ನು ಎತ್ತಿ ಹಿಡಿದಿದ್ದ ಮಹಾನ್ ರಾಷ್ಟ್ರ ಪ್ರೇಮಿ. ಪ್ರತಿಯೊಬ್ಬ ಭಾರತೀಯರೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರೀತಿಯಲ್ಲಿ ದೇಶವನ್ನು ಪ್ರೀತಿಸಿದರೆ ಭಾರತ ಪ್ರಪಂಚದ ಅತಿ ದೊಡ್ಡ ರಾಷ್ಟ್ರವಾಗುವುದರಲ್ಲಿ ಸಂಶಯವೇ ಇಲ್ಲ. ಜಗತ್ತಿನ ಬಹುತೇಕ ರಾಷ್ಟ್ರಗಳು ಅಂಬೇಡ್ಕರ್ ಅವರ ಜ್ಞಾನ ಮತ್ತು ಸಾಮಾಜಿಕ ಸಮಾನತೆಯನ್ನು ಸಾಧಿಸಲು ಅವರು ಪಟ್ಟ ಪರಿಶ್ರಮವನ್ನು ಗುರುತಿಸಿ ಒಪ್ಪಿಕೊಂಡಿವೆ ಎಂದರು.

ಶಾರದಾ ವಿಲಾಸ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್. ಚಂದ್ರಶೇಖರ್ ಕಾರ್ಕ್ರಯಮದಲ್ಲಿ ಉಪಸ್ಥಿತರಿದ್ದರು.

 

ಜಾತಿ ವ್ಯವಸ್ಥೆ ಮತ್ತು ಅಸ್ಪಶ್ಯತೆ ಈ ದೇಶದ ಶೋಷಿತ ಸಮುದಾಯಗಳನ್ನು ಇನ್ನಿಲ್ಲದಂತೆ ಶೋಷಣೆ ಮಾಡಿತ್ತು. ಇದೆಲ್ಲದರ ಅರಿವಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅಸ್ಪಶ್ಯತಾ ಆಚರಣೆ ಅಪರಾಧ ಎಂದು ಕಾನೂನು ಮಾಡಿದರು. ಜಗತ್ತಿನಲ್ಲಿ ಅಸ್ಪಶ್ಯತೆಯತಹ ಕ್ರೂರ ಆಚರಣೆಯನ್ನು ಅಪರಾಧ ಎಂದು ಕಾನೂನು ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ-

  • ಡಾ. ಸುಧಾಕರ ಹೊಸಳ್ಳಿ , ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ನಿರ್ದೇಶಕ.
ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

46 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

53 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

55 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

57 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

1 hour ago