ಮೈಸೂರು: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದೇನೆ. ಅಲ್ಲದೇ, ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಮಾಡಿ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ 25 ಪುಟಗಳ ಮಾಹಿತಿ ನೀಡಿದ್ದೇನೆ ಎಂದರು.
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು, ಆಗಾಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುವುದನ್ನು ನೋಡಿದರೆ ಲೋಕಾಯುಕ್ತ ಅಧಿಕಾರಗಳ ಮೇಲೆ ಪ್ರಭಾವ ಬೀರಲು ಬರುತ್ತಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ, ಈ ಬಗ್ಗೆ ಅನುಮಾನ ಬಗೆ ಹರಿಸಿಕೊಳ್ಳಲು ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಲೋಕಾಯುಕ್ತ ಕಚೇರಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಕೆಲವು ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಆ ಎಲ್ಲಾ ಅಂಶಗಳನ್ನು ನಾನು ಬಹಿರಂಗ ಪಡಿಸಿದ್ದೇನೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ವೈಟ್ನರ್ ಹಾಕಿರುವ ಮಾಹಿತಿಯನ್ನು ಸಹ ಕೋರ್ಟ್ ನೀಡಿರಲಿಲ್ಲ. ಸಿದ್ದರಾಮಯ್ಯ ಯಾವುದೇ ಕಾರ್ಯಕ್ರಮಗಳಿಗೆ ಹೋದರೂ ಪ್ರಚೋದನೆಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಹೀಗಾಗಿ ನನಗೆ ನನ್ನ ಕುಟುಂಬಕ್ಕೆ ಭಯವಾಗಿದೆ ಎಂದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…