ಮೈಸೂರು

ಮುಡಾ ಪ್ರಕರಣದಲ್ಲಿ ಎಂ.ಲಕ್ಷ್ಮಣ್‌ ಲೋಕಾಯುಕ್ತದ ಮೇಲೆ ಪ್ರಭಾವ: ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದೇನೆ. ಅಲ್ಲದೇ, ಮೈಸೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸುವಂತೆ ಮಾಡಿ ತನಿಖೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ 25 ಪುಟಗಳ ಮಾಹಿತಿ ನೀಡಿದ್ದೇನೆ ಎಂದರು.

ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ಅವರು, ಆಗಾಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುವುದನ್ನು ನೋಡಿದರೆ ಲೋಕಾಯುಕ್ತ ಅಧಿಕಾರಗಳ ಮೇಲೆ ಪ್ರಭಾವ ಬೀರಲು ಬರುತ್ತಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ, ಈ ಬಗ್ಗೆ ಅನುಮಾನ ಬಗೆ ಹರಿಸಿಕೊಳ್ಳಲು ಲೋಕಾಯುಕ್ತ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಲೋಕಾಯುಕ್ತ ಕಚೇರಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಕೆಲವು ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಆ ಎಲ್ಲಾ ಅಂಶಗಳನ್ನು ನಾನು ಬಹಿರಂಗ ಪಡಿಸಿದ್ದೇನೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ವೈಟ್ನರ್‌ ಹಾಕಿರುವ ಮಾಹಿತಿಯನ್ನು ಸಹ ಕೋರ್ಟ್‌ ನೀಡಿರಲಿಲ್ಲ. ಸಿದ್ದರಾಮಯ್ಯ ಯಾವುದೇ ಕಾರ್ಯಕ್ರಮಗಳಿಗೆ ಹೋದರೂ ಪ್ರಚೋದನೆಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಹೀಗಾಗಿ ನನಗೆ ನನ್ನ ಕುಟುಂಬಕ್ಕೆ ಭಯವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago