ಮೈಸೂರು

ಎಚ್‌ಸಿಎಂ ಹಾಗೂ ಯತೀಂದ್ರ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಅವರು ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಅವರು ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕ ಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು. ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು ಈ ಸಂಬಂಧ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಬಿನಿ ನದಿಯಿಂದ ಪ್ರವಾಹ ಉಂಟಾಗಿದ್ದು ಇದರಿಂದ ಹಾನಿ ಆಗಿರುವ ಮನೆ ಹಾಗೂ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಪರಿಹಾರ ನೀಡಲಾಗುವುದು. ಈಗ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ಕಬಿನಿ ಜಲಾಶಯ ಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಕಬಿನಿಯಿಂದ ಹೆಚ್ಚಿನ ನೀರು ಹರಿಸಿದ್ದರಿಂದ ಪ್ರವಾಹ ಉಂಟಾಗಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಮೈಸೂರು ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿ ಆಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. 46 ಮನೆಗಳಿಗೆ ನೀರು ಬಂದಿದೆ. ಗಂಜಿ ಕೇಂದ್ರದಲ್ಲಿ 446 ಜನ ಸೌಲಭ್ಯ ಪಡೆಯುತ್ತಿದ್ದಾರೆ. 80 ಕುಟುಂಬಗಳು ಪ್ರವಾಹದಿಂದ ಬಾಧಿತರಾಗಿದ್ದಾರೆ. ಈ 80 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ರಾದ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ ಸೂಕ್ತ ಜಾಗವನ್ನು ಗುರುತಿಸಿ ಅಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಿ, ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲು ಸರ್ಕಾರದ ವತಿಯಿಂದ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಊರಿನ ಮುಖಂಡರು ಮಾತನಾಡಿ ಬೊಕ್ಕ ಹಳ್ಳಿ ಗ್ರಾಮ ಪ್ರತಿ ವರ್ಷ ಮುಳುಗಡೆ ಆಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೇರೆ ಕಡೆ ನಿವೇಶನಗಳನ್ನು ಕೊಟ್ಟು ಮನೆ ನಿರ್ಮಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಹಾಗೂ ಸಂತ್ರಸ್ತರಿಗೆ ಬೆಡ್ ಶಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

8 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

8 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

9 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

9 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

10 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

11 hours ago