ಮೈಸೂರು : ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಟ್ರಾಂಗ್ ರೂಮ್ ನಲ್ಲಿ ಮತಯಂತ್ರಗಳ ರಕ್ಷಣೆ ಹಾಗೂ ಭದ್ರತೆ ಕುರಿತು ತೆಗೆದುಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ವಿನಯ್ ಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮಹೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.