ಮೈಸೂರು

ಮೈೂಸೂರು ವಿ.ವಿ ಕುಲಪತಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಸೂಚನೆ

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಜಾತಿ ಆಧಾರಿತ ಮಾನಸಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ವಿ.ವಿ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

ವಿದ್ಯಾರ್ಥಿ ಕಾರ್ತಿಕ್ ಜಿ.ಎನ್. ಅವರು ನೀಡಿದ ದೂರಿನ ಆಧಾರದ ಮೇಲೆ, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ ಅಡಿಯಲ್ಲಿ ತಕ್ಷಣ ಎಫ್‌ಐಆರ್‌ ದಾಖಲಿಸುವಂತೆ ಆಯೋಗ ಆದೇಶಿಸಿದೆ.

ಏಪ್ರಿಲ್ 16ರಂದು ಆಯೋಗವು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಪತ್ರ ಬರೆದು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಡಾ.ಎಂ.ಸುರೇಶ್ ಬೆಂಜಮೀನ್, ಪ್ರೊ.ಆರ್.ಎಸ್.ಉಮಾಕಾಂತ್ ಮತ್ತು ಅಶ್ವಥ್ ಪ್ರಸಾದ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ. ಜತೆಗೆ ಎಫ್‌ಐಆರ್‌ ಪ್ರತಿಯನ್ನು ಕೂಡಲೇ ಆಯೋಗಕ್ಕೆ ಸಲ್ಲಿಸುವಂತೆಯೂ ಸೂಚನೆ ನೀಡಲಾಗಿದೆ.

ಆರೋಪಗಳ ವಿವರ
ವಿದ್ಯಾರ್ಥಿ ಕಾರ್ತಿಕ್ ಅವರಿಗೆ ಜಾತಿ ಆಧಾರಿತ ಹಿಂಸೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪಗಳೊಂದಿಗೆ, ನ್ಯಾಯ ಕೇಳಲು ಹೋದಾಗ ಅವಮಾನಕಾರಿ ವರ್ತನೆ ತೋರಿದ್ದು, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ಆರೋಪಗಳೂ ದಾಖಲಾಗಿವೆ. ಇದಲ್ಲದೆ ದೂರು ನೀಡಲು ಹೋದಾಗ ಪೊಲೀಸರು ಸಹ ನಿರ್ಲಕ್ಷ್ಯ ತೋರಿದ ಆರೋಪ ಕೂಡ ಹೊರಬಂದಿದೆ.

ಈ ಘಟನೆಯು ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ವಿಶ್ವವಿದ್ಯಾಲಯದಂತಹ ಉನ್ನತ ಶಿಕ್ಷಣ ಸಂಸ್ಥೆಯಲ್ಲೇ ಜಾತಿ ಹಿಂಸೆ ನಡೆಯುತ್ತಿದೆ ಎಂಬ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಆಯೋಗದ ಈ ಕಠಿಣ ಆದೇಶದ ನಂತರ ಮುಂದಿನ ಕಾನೂನು ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago