ಮೈಸೂರು: ಮೈಸೂರು (Mysuru) ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Ambedkar) ಭಾವಚಿತ್ರ ಹರಿದು ಹಾಕಿ, ಚಪ್ಪಲಿ ಹಾರ ಹಾಕಿ ಅಪಮಾನ (Insult) ಮಾಡಿರುವುದನ್ನು ಖಂಡಿಸಿ ಗ್ರಾಮದಲ್ಲಿ ಮಹಿಳೆಯರು (Women) ಹಾಗೂ ಸಮುದಾಯದ ಮುಖಂಡರು, ಯುವಕರುಗಳು ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ ಹಿನ್ನೆಲೆ:- ವಾಜಮಂಗಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ವಿರೂಪ: ಸ್ಥಳದಲ್ಲಿ ಬಿಗುವಿನ ವಾತಾವರಣ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು ಮಾಜಿ ಮೇಯರ್ ಪುರುಷೋತ್ತಮ್ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರುಗಳು ಸ್ಥಳಕ್ಕೆ ಆಗಮಿಸಿ ವಾತಾವರಣ ತಿಳಿಗೊಳಿಸುವ ಪ್ರಯತ್ನ ನಡೆಸಿದರು.
ಈ ವೇಳೆ ಸ್ಥಳದಲ್ಲಿ ಜಮಾಯಿಸಿದ್ದ ಮಹಿಳೆಯರು ತಪ್ಪು ಮಾಡಿದ್ದವನನ್ನ ನಮಗೆ ವಹಿಸಿ, ದೇವರೆಂದು ಪೂಜಿಸುವ ಹಾಗೂ ದೇಶಕ್ಕೆ ಸಂವಿಧಾನ ನೀಡಿದ ಡಾ ಬಿ ಆರ್ ಅಂಬೇಡ್ಕರ್‌ಗೆ ಅಪಮಾನ ಮಾಡಿರುವುದನ್ನು ಸಹಿಸಿಕೊಳ್ಳುಳು ಸಾಧ್ಯವಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದರು.





