Kabini Dam
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ.
ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಬಿನಿ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ.
ಜಲಾಶಯದ ಇಂದಿನ ಒಳಹರಿವು 14,948 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 12 ಸಾವಿರ ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳಾಗಿದೆ.
ಮಳೆ ಹೀಗೇಯೇ ಮುಂದುವರಿದರೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಲಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ. ಹಾಗಾಗಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…