Mysore
15
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಒಳ ಮೀಸಲಾತಿ | ಮೂರು ಹಂತದಲ್ಲಿ ಎಸ್‌ಸಿ ಕುಟುಂಬಗಳ ಸಮೀಕ್ಷೆ

Internal reservation Survey of SC families in three phases

ಮೈಸೂರು : ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮನೆ ಮನೆ ಸಮೀಕ್ಷೆ, ವಿಶೇಷ ಶಿಬಿರ ಹಾಗೂ ಅನ್ಲೈನ್ ನಲ್ಲಿ ಸ್ವಯಂ ಘೋಷಣೆ ಮೂಲಕ 3 ಹಂತಳಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಯುಕೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಂಬಂಧ ರಚಿಸಲಾಗಿರುವ ಹೆಚ್.ಎನ್ ನಾಗಮೋಹನ್ ದಾಸ್ ಕಮಿಟಿಯ ಸಮೀಕ್ಷೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳನ್ನು ಗುರುತಿಸಲಾಗಿದೆ.

ಮೂರು ಹಂತಗಳಲ್ಲಿ ಆಗಬೇಕಿರುವ ಸಮೀಕ್ಷೆ. ಜಿಲ್ಲೆಯಿಂದ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ ನ್ನು ಆಯ್ಕೆ ಮಾಡಿ ತರಬೇತಿಗೆ ರಾಜ್ಯ ಮಟ್ಟಕ್ಕೆ ಕಳುಹಿಸಲಾಗಿದೆ. ಮೇ 05 ರಿಂದ 17 ವರೆಗೆ ಮನೆ ಮನೆ ಬೇಟಿ ನೀಡಿ ಸಮೀಕ್ಷೆ ಮಾಡಲಾಗುತ್ತಿದೆ. ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳನ್ನು ಮೇ 19 ರಿಂದ ಮೇ 21 ರವರೆಗೆ ಹಾಗೂ ಅನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮೇ 19 ರಿಂದ ಮೇ 23 ರವರೆಗೆ ನಡೆಸಲಾಗುತ್ತಿದೆ ಎಂದರು.

ಇಲ್ಲಿ ಪರಿಶಿಷ್ಟ ಜಾತಿಯ ಜನರ ಸಮೀಕ್ಷೆಯನ್ನು ಮಾತ್ರ ನಡೆಸಲಾಗುತ್ತದೆ. ಶಿಕ್ಷಕರು ಸಮೀಕ್ಷೆಗೆ ಮನೆ ಮನೆಗೆ ಬಂದಾಗ ಪರಿಶಿಷ್ಟ ಜಾತಿಯ ಸದಸ್ಯರು ಸಹಕರಿಸಿ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಮಾತನಾಡಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಒಳ ಜಾತಿಗಳಲ್ಲಿ ವಿವಿಧತೆ ಇದೆ. ಆದ್ದರಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣಕ್ಕೆ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯನ್ನು ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿ ಜನಾಂಗ ದವರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯಗಳು ಮುಂತಾದ ಸಾಮಾನ್ಯ ಮಾಹಿತಿಗಳು, ಆರ್ಥಿಕತೆಗೆ ಸಂಬಂದಿಸಿದ ಮಾಹಿತಿಗಳು, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ , ಭೂಮಿಯ ಒಡೆತನ, ಮನೆ ಆದಾಯ ಮುಂತಾದ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ತಿಳಿಸಿದರು.

ಸಮೀಕ್ಷೆ 3 ಹಂತಗಳಲ್ಲಿ ನಡೆಯುತ್ತದೆ. ಮೊದಲನೇ ಹಂತ ಮನೆ ಮನೆ ಸಮೀಕ್ಷೆ, ಕ್ಯಾಂಪ್ ರೀತಿ ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ಹಾಗೂ ಅನ್ ಲೈನ್ ರಿಜಿಸ್ಟ್ರೇಷನ್ ನಡೆಯುತ್ತದೆ. ಸಮೀಕ್ಷೆಗೆ ಶಿಕ್ಷಕರನ್ನು ಬಳಸಿಕೊಳ್ಳಲಾಗುವುದು. ಸಮೀಕ್ಷೆ ಮೊಬೈಲ್ ಅಪ್ ಮೂಲಕ ಅನ್ ಲೈನ್ ನಲ್ಲಿ ಸಮೀಕ್ಷೆ ಮಾಡಲಾಗುವುದು. ಸಮೀಕ್ಷೆಯಲ್ಲಿ ಆಧಾರ್ ಸಂಖ್ಯೆ, ಜಾತಿ ಸಂಖ್ಯೆ, ಮೊಬೈಲ್ ಸಂಖ್ಯೆ ಅಗತ್ಯ. ಸಮೀಕ್ಷೆಯಲ್ಲಿ ಆದಿ ಕರ್ನಾಟಕ ಆದಿ ದ್ರಾವಿಡ ಹೀಗೆ ಉಪ ಜಾತಿಗಳನ್ನು ನಮೂದಿಸಬೇಕು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!