Thimmaiah
ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು.
ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ ಸಮುದಾಯ 30 ವರ್ಷದಿಂದ ಹೋರಾಟ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಚುನಾವಣೆ ವೇಳೆ ಹೇಳಿದಂತೆ ಒಳ ಮೀಸಲಾತಿ ಜಾರಿಗೆ ಮುಂದಾಗಿದ್ದಾರೆ. ಅಂಕಿ ಅಂಶದ ಕೊರತೆ ಇರುವ ಕಾರಣ ನಾಗಮೋಹನ್ ನೇತೃತ್ವದ ಸಮೀಕ್ಷೆ ನಡೆಯುತ್ತಿದೆ. ಇದು ಬಹುತೇಕ ಪೂರ್ಣಗೊಂಡಿದ್ದು, ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸ್ವಯಂ ಘೋಷಿತ ಹೋರಾಟ ಸಮಿತಿಗಳು ಮಾದಿಗ ಸಮುದಾಯದ ಜನರನ್ನ ದಿಕ್ಕು ತಪ್ಪಿಸಿ, ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿವೆ. ಇವಾಗ ಕಿರುಚಾಡುತ್ತಿರುವ ಇವರ್ಯಾರು ಒಳ ಮೀಸಲಾತಿ ಹೋರಾಟದಲ್ಲಿ ಭಾಗಿಯೇ ಆಗಿಲ್ಲ ಎಂದು ಹೇಳಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಕೆಲ ನಾಯಕರು ಸಿಎಂ ಸಿದ್ದರಾಮಯ್ಯ, ಸಚಿವರಾದ ಮಹದೇವಪ್ಪ, ಆಜನೇಯ, ಮುನಿಯಪ್ಪ ಅವರ ವಿರುದ್ಧ ಅಪಪ್ರಚಾರ ಮಾಡಲು ಮುಂದಾಗಿದ್ದಾರೆ. ಸಮಾಜದ ಶಾಂತಿ ಕದಡುವ ಕೆಲಸವನ್ನೂ ಸಹ ಮಾಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ:- ಆರ್‌ಸಿಬಿ ವಿಜಯೋತ್ಸವ | ಸರ್ಕಾರದ ಮೇಲೆ ಒತ್ತಡ ಇತ್ತು : ಶಾಸಕ ಹರೀಶ್ ಗೌಡ
ಭಾಸ್ಕರ್ ಪ್ರಸಾದ್ ಅನ್ನುವ ವ್ಯಕ್ತಿ ಯಾರೆಂಬುದೇ ಗೊತ್ತಿಲ್ಲ. ಅವರ ಹೋರಾಟಕ್ಕೆ ವಿಪಕ್ಷ ನಾಯಕರ ಕುಮ್ಮಕ್ಕು ಇದೆ. ಇದೇ ತಿಂಗಳ 9ನೇ ತಾರೀಖು ನಡೆಯುವ ಅವರ ಹೋರಾಟಕ್ಕೆ ನಮ್ಮ ಸಮುದಾಯದ ಜನ ಯಾರು ಹೋಗಬಾರದು ಎಂದು ಮನವಿ ಮಾಡಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…