ಮೈಸೂರು

ಅಂತಾರಾಷ್ಟ್ರೀಯ ಸಮ್ಮೇಳನ : ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ – ಶೈಲೇಶ್ ಹರಿಭಕ್ತಿ

ಮೈಸೂರು : ವಿಶ್ವಕ್ಕೆ ಜಾಗತಿಕ ತಾಪಮಾನ ಕಾಡುತ್ತಿದ್ದು, ಹೊಸ ಹೊಸ ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು  ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮದ ಸಮನ್ವಯಾಧಿಕಾರಿ ಶೈಲೇಶ್ ಹರಿಭಕ್ತಿ ತಿಳಿಸಿದರು.

ಮಾನಸ ಗಂಗೋತ್ರಿಯ ರಾಣಿ ಬಹದ್ದೂರು ಸಭಾಂಗಣದಲ್ಲಿ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಜ್ಞಾನ ಪಾಲುದಾರಿಕೆ ಎಂಬ ವಿಷಯದ ಬಗ್ಗೆ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.

ಸುಸ್ಥಿರ ಅಭಿವೃದ್ಧಿ ‌ಕಾರ್ಯಕ್ರಮವನ್ನು ಭಾರತವು ಅನುಷ್ಠಾನಕ್ಕೆ ತಂದಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಳೆದ ಮೂರು ವರ್ಷದ ಹಿಂದೆ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮಗಳು ಮುನ್ನಲೆಗೆ ಬಂದವು. ಆದರೆ, ನಂತರ ಇದು ನಿಧಾನಗತಿಯಲ್ಲಿ ಸಾಗಲು ಶುರುವಾಯಿತು. ಆದರೆ, ಇದೀಗ ಮತ್ತೆ ಸುಸ್ಥಿರತೆ ಬಗ್ಗೆ ಹೆಚ್ಚಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಖುಷಿಯ ವಿಚಾರ ಎಂದು ಹೇಳಿದರು.

ಅದೈತ್ವ ಸಿದ್ಧಾಂತದಲ್ಲಿ ಶಂಕರಾಚಾರ್ಯರು ಸುಸ್ಥಿರ ಅಭಿವೃದ್ಧಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಹಳ ಹಿಂದಿನ ಕಾಲದಿಂದಲೂ ಇದರ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಅರ್ಥಶಾಸಜ್ಞರು ಹೇಳುವ ಪ್ರಕಾರ ಅಭಿವೃದ್ಧಿ ವಿಚಾರದಲ್ಲಿರುವ ನಮ್ಮ ಗುರಿಯನ್ನು ಬದಲಾಯಿಸಿಕೊಳ್ಳಬೇಕಿದೆ. ಜಾಗತಿಕ ತಾಪಮಾನವನ್ನು ತಡೆದುಕೊಳ್ಳುವ ಶಕ್ತಿ ನಮ್ಮ ಪರಿಸರಕ್ಕೆ ಇಲ್ಲ. ಹಾಗಾಗಿ ಪರಿಸರವನ್ನು ಸಂರಕ್ಷಿಸಬೇಕಿದೆ. ಅದಕ್ಕೆ ಬೇಕಾದ ಪಾಲಿಸಿಗಳನ್ನು ಜಾರಿಗೆ ತರಬೇಕಿದೆ ಎಂದು ಕಿವಿಮಾತು ಹೇಳಿದರು.

andolana

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago