ಮೈಸೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೆ.೧೫ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ೬ ಗಂಟೆಗೆ ಮೈಸೂರು ಜಿಲ್ಲೆಯಿಂದ ೧೦ ಜನ ಬೈಕ್ ರೈಡರ್ಸ್‌ಗಳನ್ನು ಬೈಕ್ ಜಾಥಾದ ಮೂಲಕ ಮೈಸೂರು ನಗರದಿಂದ ಬೆಂಗಳೂರಿಗೆ ಕಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಅರಿವು ಮೂಡಿಸುವಲ್ಲಿ ಪ್ರತಿ ಜಿಲ್ಲೆಯಿಂದ ಬರುವ ಬೈಕ್ ಜಾಥಾವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಈ ಬಾರಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಸರ್ಕಾರವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ವ್ಯಾಪಕವಾಗಿ ಅರಿವು ಮೂಡಿಸುವ ಉದ್ದೇಶದಿಂದ ‘ನನ್ನ ಮತ ನನ್ನ ಹಕ್ಕು’ ಎಂಬ ಶೀರ್ಷಿಕೆಯಡಿ ಮೂರು ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ಆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನ.೨೬ರಂದು ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲು ನಿರ್ಧರಿಸಿದೆ.
ಸೆ.೧೫ರಂದು ಮೈಸೂರು ಜಿಲ್ಲಾಮಟ್ಟದಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆಗಳಿಗೆ ಅಧಿಕೃತವಾಗಿ ವಿದ್ಯುಕ್ತ ಚಾಲನೆ ನೀಡಲಾಗುವುದು. ಸೆ.೧೫ರಿಂದ ನ.೨೬ರವರೆಗೂ ಜಿಲ್ಲೆಯಲ್ಲಿ ವಿವಿಧ ಹಂತಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಮೇಲಿನ ಸ್ಪರ್ಧೆಗಳನ್ನು ನಡೆಸಿ ಅದರಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ರಾಜ್ಯಮಟ್ಟಕ್ಕೆ ಕಳಿಸಲಾಗುವುದು. ಜಿಲ್ಲಾಮಟ್ಟದಲ್ಲೂ ಪ್ರಶಸ್ತಿ ವಿತರಣೆ ಮಾಡಲಾಗುವುದು. ೧೪ ವರ್ಷ ಮೇಲ್ಪಟ್ಟ ಎಲ್ಲರೂ ಈ ಜಾಥಾದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸೈಕಲ್ ಜಾಥಾವು ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಽಕಾರಿಗಳ ಕಚೇರಿಯ ಆವರಣದಿಂದ ಪ್ರಾರಂಭವಾಗಿ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿ ಪುರಭವನದ ಮುಂಭಾಗದ ಅಂಬೇಡ್ಕರ್ ಪುತ್ತಳಿ ಬಳಿ ಮುಕ್ತಾಯಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಯನ್ನು ಹಾಗೂ ಮೊ.ಸಂ.: ೯೪೮೨೩ ೦೦೪೦೦ನ್ನು ಸಂಪರ್ಕಿಸಬಹುದಾಗಿದೆ.
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…