government school
ಮೈಸೂರು : ಇಂದಿನಿಂದ ಶಾಲೆಗಳು ಆರಂಭವಾದ ಹಿನ್ನೆಲೆ ನಗರದಲ್ಲಿ ಮಕ್ಕಳಿಗೆ ಗುಲಾಬಿ ಹಾಗೂ ಸಿಹಿ ತಿನಿಸುಗಳನ್ನು ನೀಡಿ ಬರಮಾಡಿಕೊಳ್ಳಲಾಯಿತು.
ಮೈಸೂರಿನ ಅಗ್ರಹಾರದಲ್ಲಿರುವ ಅಕ್ಕನ ಬಳಗ ಸರ್ಕಾರಿ ಶಾಲೆಯಲ್ಲಿ ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮೈಸೂರಿನ ದುರ್ಗ ಫೌಂಡೇಶನ್ ನ ಸಿಬ್ಬಂದಿಯು ಗುಲಾಬಿ ಹೂ, ಸಿಹಿ ತಿನಿಸುಗಳನ್ನು ನೀಡಿ ಶಾಲೆಗೆ ಬರ ಮಾಡಿಕೊಂಡರು. ಇದೆ ವೇಳೆ ಮಕ್ಕಳಿಗೆ ಅಕ್ಷರಾಭ್ಯಾಷ ನಡೆಸಿ ಶುಭ ಕೋರಲಾಯಿತು.
ಈ ವೇಳೆ ದುರ್ಗ ಫೌಂಡೇಶನ್ ನ ಸಿಬ್ಬಂದಿ ಮಾತನಾಡಿ, ಕನ್ನಡ ಶಾಲೆಗಳು ಅಳಿವಿನಂಚಿನಲ್ಲಿದ್ದು ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕಿದೆ. ಶಾಲೆಯಲ್ಲಿ ಮಕ್ಕಳಿಗೆ ಖುಷಿಯ ವಾತಾವರಣ ನೀಡಿದರೆ ಸಂತಸದಿಂದ ಶಾಲೆಗೆ ಬರಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪೋಷಕರು ಇಂಗ್ಲಿಷ್ ಮಾಧ್ಯಮಗಳ ಮೊರೆ ಹೋಗಿದ್ದಾರೆ, ನಮ್ಮ ಭಾಷೆಯ ಮೇಲೆ ಪೋಷಕರುಗಳಿಗೆ ಕೀಳರಿಮೆ ಇದೆ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಯ ಕನ್ನಡ ಶಾಲೆಗಳಿಗೆ ಸೇರಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಬೇಕು ಎಂದು ತಿಳಿಸಿದರು
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…
ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…