ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಒಂದಾದ ನೀರಾವರಿ ಪೈಪ್ ಗಳ ಬೆಲೆಯೂ ಏರಿಕೆಯಾಗಿದೆ.
ರೂ. 335ರಿಂದ ರೂ. 365ರೂ.ಗಳಿದ್ದ ಪೈಪ್ ಗಳ ಬೆಲೆ ಈಗ ಸರಾಸರಿ 365-395 ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಈಗಾಗಲೇ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ರೈತರು ಪರದಾಡುತ್ತಿದ್ದಾರೆ. ಅಲ್ಲದೇ ಬಿತ್ತನೆ ಬೀಜ, ಗೊಬ್ಬರಗಳ ಬೆಲೆ ಏರಿಕೆಯ ನಡುವೆ ಈಗ ಪೈಪ್‌ಗಳ ಬೆಲೆಯೂ ಏರಿಕೆಯಾಗಿರುವುದು ರೈತರಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಫೆಬ್ರವರಿ ಆರಂಭದಲ್ಲಿಯೇ ಭೂಮಿಗಳನ್ನು ಉಳುಮೆ ಮಾಡಿ ಸಿದ್ಧಪಡಿಸಿಕೊಳ್ಳುತ್ತಿದ್ದ ರೈತರು ಈಗಾಗಲೇ ಶುಂಠಿ, ಬಾಳೆ ಹಾಗೂ ಇತರೆ ಬೆಳೆಗಳಿಗೆ ಸಿದ್ಧತೆ ಮಾಡಿ ಮುಗಿಸಿದ್ದಾರೆ. ಇನ್ನೇನು ಆ ಜಮೀನುಗಳಿಗೆ ಪೈಪ್ ಲೈನ್ ಮಾಡಬೇಕು ಎನ್ನುವಷ್ಟರಲ್ಲಿಯೇ ಈ ಬೆಲೆ ಏರಿಕೆಯಾಗಿರುವುದು ನಿಜಕ್ಕೂ ಆಘಾತಕಾರಿ ಎಂಬುದು ರೈತರ ಅನಿಸಿಕೆಯಾಗಿದೆ.
ಈಗಾಗಲೇ ಕೃಷಿ ಕ್ಷೇತ್ರದಲ್ಲಿ ಲಾಭ ಕಡಿಮೆ ಎಂಬ ಅಭಿಪ್ರಾಯವಿದ್ದು, ರೈತರು ಕೃಷಿ ತೊರೆಯುತ್ತಿದ್ದಾರೆ. ಈ ನಡುವೆಯೇ ಇಂತಹ ಬೆಲೆ ಏರಿಕೆಗಳು ರೈತರನ್ನು ಕೃಷಿಯಿಂದ ದೂರ ಮಾಡಲಿವೆ ಎಂಬುದು ರೈತರ ಆತಂಕವಾಗಿದೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…