ಮೈಸೂರು : ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ ನೇಮಕಾತಿ ಆಗಲಿದೆ ಎಂದಿದ್ದಾರೆ.
400 ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ : ಇನ್ನೂ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರ ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5ನೇ ತಾರೀಖು ನಮ್ಮ ಅಭಿಪ್ರಾಯ ಹೇಳುತ್ತೇವೆ. ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ ಈಗಾಗಲೇ ಭಾಗಶಃ ವರದಿ ಅನುಷ್ಠಾನ ಆಗಿದೆ. ಸಂಬಳದ ವಿಚಾರದ ವರದಿ ಜಾರಿ ಬಗ್ಗೆ ಚಿಂತನೆ. ಪೊಲೀಸರಿಗೆ ವಾರದ ರಜೆ ಕೊಡಬೇಕು ಅದನ್ನು ಅನುಷ್ಠಾನ ಮಾಡುತ್ತೇನೆ ಅದು ಅವರಿಗೆ ಅವಶ್ಯಕವಾಗಿ ಬೇಕಾಗಿದೆ. ಈ ಮೂಲಕ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಂತರ ಉತ್ತಮವಾಗಿ ಕೆಲಸ ಮಾಡಬಹುದು. ಪೊಲೀಸ್ ಅಧಿಕಾರಿಗಳ ವಾರದ ರಜೆ ಪರ ನಾನಿದ್ದೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಅದಷ್ಟು ಬೇಗ ತೀರ್ಮಾನ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದರು.