ಮೈಸೂರು

ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ – ಗೃಹ ಸಚಿವ ಪರಮೇಶ್ವರ್ ಹೇಳಿಕೆ.!

ಮೈಸೂರು : ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ ನೇಮಕಾತಿ ಆಗಲಿದೆ ಎಂದಿದ್ದಾರೆ.

400 ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ : ಇನ್ನೂ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರ ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5ನೇ ತಾರೀಖು ನಮ್ಮ‌ ಅಭಿಪ್ರಾಯ ಹೇಳುತ್ತೇವೆ. ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ ಈಗಾಗಲೇ ಭಾಗಶಃ ವರದಿ ಅನುಷ್ಠಾನ ಆಗಿದೆ. ಸಂಬಳದ ವಿಚಾರದ ವರದಿ ಜಾರಿ ಬಗ್ಗೆ ಚಿಂತನೆ. ಪೊಲೀಸರಿಗೆ ವಾರದ ರಜೆ ಕೊಡಬೇಕು ಅದನ್ನು ಅನುಷ್ಠಾನ ಮಾಡುತ್ತೇನೆ ಅದು ಅವರಿಗೆ ಅವಶ್ಯಕವಾಗಿ ಬೇಕಾಗಿದೆ. ಈ ಮೂಲಕ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಂತರ ಉತ್ತಮವಾಗಿ ಕೆಲಸ ಮಾಡಬಹುದು. ಪೊಲೀಸ್ ಅಧಿಕಾರಿಗಳ ವಾರದ ರಜೆ ಪರ ನಾನಿದ್ದೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಅದಷ್ಟು ಬೇಗ ತೀರ್ಮಾನ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದರು.

lokesh

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

50 mins ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

54 mins ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

59 mins ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

1 hour ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

13 hours ago