Mysore
23
few clouds

Social Media

ಶುಕ್ರವಾರ, 09 ಜನವರಿ 2026
Light
Dark

ನಮ್ಮಪ್ಪ 5 ವರ್ಷ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಎಲ್ಲಾ ಕಡೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ನವೆಂಬರ್‌ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್‌ ಆಗಲಿ, ಬೇರೆ ನಾಯಕರಾಗಲಿ ಯಾರೂ ಕೂಡ ನವೆಂಬರ್‌ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ.

ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!