Jaggi Vasudev visits Suttur Math
ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠಕ್ಕೆ ಈಶಾ ಫೌಂಡೇಶನ್‌ನ ಸ್ಥಾಪಕ ಜಗ್ಗಿ ವಾಸುದೇವ್ ಅವರು ಭಾನುವಾರ ಸಂಜೆ ಭೇಟಿ ನೀಡಿದರು.
ಬೆಂಗಳೂರಿನಿಂದ ಮಠಕ್ಕೆ ಆಗಮಿಸಿದ ಅವರನ್ನು ಸಾಂಪ್ರದಾಯಿಕವಾಗಿ ಮಂತ್ರಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಮಂಜುನಾಥ್ ಅವರು ಮೈಸೂರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು.
ನಂತರ, ಸುತ್ತೂರುಶ್ರೀಗಳನ್ನು ಭೇಟಿ ಮಾಡಿದರು. ಜಗ್ಗಿ ವಾಸುದೇವ್ ಅವರಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿದರು. ಬಳಿಕ ಉಭಯ ಕುಶಲೋಪರಿ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಜಗ್ಗಿವಾಸುದೇವ್, ಇದೊಂದು ಸೌಜನ್ಯಯುತ ಭೇಟಿಯಾಗಿದೆ.
ಎರಡು ವರ್ಷಗಳಿಂದ ಸುತ್ತೂರು ಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೃದಯಘಾತಕ್ಕೆ ಒಳಗಾಗಿ ಹೊಸದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶ್ರೀಗಳು ಬಂದು ಆರೋಗ್ಯ ವಿಚಾರಿಸಿದ್ದರು. ಅಲ್ಲಿಂದ ಬರಬೇಕೆಂದು ಅಂದು ಕೊಂಡರೂ ನಾನಾ ಕಾರಣಕ್ಕೆ ಬಂದಿರಲಿಲ್ಲ. ಈಗ ಬಂದಿರುವೆ ಎಂದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…