ಮೈಸೂರು

ಡಿ.ಆರ್.ಸಿ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರ ಭೇಟಿ

ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್‌.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು ಹಾಗಾಗಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಜಯಲಕ್ಷ್ಮೀಪುರಂ ಇನ್ಸ್‌ ಪೆಕ್ಟ್ರ್‌ ಕುಮಾರ್‌ ನೇತೃತ್ವದಲ್ಲಿ ಪ್ರಕರಣ ಸಂಬಂಧ ತನಿಖೆ  ನಡೆಯುತ್ತಿದ್ದು,  ಇಂದು ಪೊಲೀಸರು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿಸಿಟಿವಿ ವಿಡಿಯೋ ಪರಿಶೀಲನೆ ಮಾಡಿದರು. ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದ ಪೊಲೀಸರು, ಬಳಿಕ ಚಿತ್ರಮಂದಿರ ಮಾಲೀಕರಿಂದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.  ಪ್ರಕರಣದ ಬಗ್ಗೆ ಚಿತ್ರಮಂದಿರದ ಮಾಲೀಕರು ಸಹ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಶಾಲಾ ಪ್ರವೇಶಾತಿಗೆ ವಯೋಮಿತಿ ಸಡಿಲಿಸಿ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ…

3 mins ago

ಬಿಸಿಲ ದಾಹ ತಣಿಸಲು ಕಲ್ಲಂಗಡಿ ಲಗ್ಗೆ

ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ…

7 mins ago

ಮೋದಿ ಸರ್ಕಾರದ ‘ಇರಾನ್ ನೀತಿ’ ಬದಲಾದದ್ದೇಕೆ?

* ಪ್ರಧಾನಿ ಮೋದಿ ಆರಂಭದ ವರ್ಷಗಳಲ್ಲಿ ಇಸ್ರೇಲ್ -ಇರಾನ್ ಜೊತೆಗೆ ಉತ್ತಮ ಸಂಬಂಧವನ್ನೇ ಮುಂದುವರಿಸಿದ್ದರು * ಈಗ ಧಿಡೀರ್‌ನೇ ಯೂ…

10 mins ago

34 ವರ್ಷಗಳ ಬಳಿಕ ಮತ್ತೆ ‘ಕರ್ಣಾಟ ಭಾರತ ಕಥಾಮಂಜರಿ’ ಕೃತಿ

ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಿಂದ ಮರುಮುದ್ರಣ; ಓದುಗರಿಗೆ ಲಭ್ಯ ಮೈಸೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಮತ್ತು ಮಾಸ್ತಿ ವೆಂಕಟೇಶ್ ಅಯ್ಯಂಗಾರ್…

19 mins ago

ಬಿಸಿಲೂ ಆಘಾತ; ಮುನ್ನೆಚ್ಚರಿಕೆ ಸೂಕ್ತ

ಗಿರೀಶ್ ಹುಣಸೂರು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಲವು ಸಲಹೆ ಮೈಸೂರು: ಬೇಸಿಗೆಯ ಈ ಋತುಮಾನದಲ್ಲಿ ಹೆಚ್ಚುತ್ತಿರುವ ತೀವ್ರ ತಾಪಮಾನ,…

24 mins ago

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

11 hours ago