ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ ಹೇಳಿದ್ದಾರೆ.
ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ನಡೆಸಿದ ಮಾತುಕತೆ ಫಲಪ್ರದವಾಯಿತು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ತಮ್ಮ ಬಗ್ಗೆ ದೇವೇಗೌಡರಿಗೆ ತುಂಬಾ ಪ್ರೀತಿ ಇದೆ. ನನ್ನನ್ನು ಮರಿ ದೇವೇಗೌಡ ಎಂದು ಕರೆಯುತ್ತಿದ್ದರು. ನಾನು ಮೂರು ವರ್ಷಗಳಿಂದ ಜೆಡಿಎಸ್ ನಿಂದ ದೂರ ಉಳಿದಿದ್ದೆ. ಆದರೂ ದೇವೇಗೌಡರು ಹಾಗೂ ಪಕ್ಷದ ಬಗ್ಗೆ ಪ್ರೀತಿ ಕಡಿಮೆಯಾಗಿರಲಿಲ್ಲ ಎಂದು ಹೇಳಿದರು.ಬಹಳ ಕಷ್ಟಪಟ್ಟು ದೇವೇಗೌಡರು ಪ್ರಾದೇಶಿಕ ಪಕ್ಷವನ್ನು ಉಳಿಸಿದ್ದಾರೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕನಸನ್ನು ನಾವೆಲ್ಲರೂ ಸೇರಿ ನನಸು ಮಾಡುತ್ತೇವೆ ಎಂದರು.
ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮಗುರಿ. ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿಯವರು ಕರೆದಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಬೇರೆ ಪಕ್ಷಗಳಿಗೆ ಹೋಗುವುದಿಲ್ಲ. ಜೆಡಿಎಸ್‌ನಲ್ಲೇ ಉಳಿಯುತ್ತೇನೆ, ಈ ಪಕ್ಷಕ್ಕೆ ಯಾವುದೇ ಕಳಂಕ ತರದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ ಎಂದು ಜಿ.ಟಿ.ದೇವೇಗೌಡ ಭಾವುಕರಾದರು.
ಇದೇ ವೇಳೆ ಮಾತಾನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ನಾನು ಜಿಟಿಡಿ ಅವರನ್ನು ಮರಿ ದೇವೇಗೌಡ ಎಂದು ಕರೆಯುತ್ತೇನೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಜಿಟಿಡಿ ಬೆಳೆಯಬಾರದು ಎಂಬ ಕಾರಣಕ್ಕಾಗಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದರು. ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು. ನಮ್ಮ ಶಕ್ತಿಯನ್ನು ಬಳಸಿಕೊಳ್ಳಬೇಕು ಎಂದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…