ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜಿಪಿ-ಜೆಡಿಎಸ್ ಈಗ ಮತ್ತೊಮ್ಮೆ ತಮ್ಮ ಮೈತ್ರಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ರಾಜ್ಯದಲ್ಲಿ ಆರು ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು (ಮೇ.11 ಶನಿವಾರ) ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯದಲ್ಲಿ 6 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಬಿಜೆಪಿ-ಜೆಡಿಎಸ್ ಕಣಕ್ಕಿಳಿಯಲಿದೆ. ಇದರಲ್ಲಿ ಬಿಜೆಪಿ 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೇ, ಜೆಡಿಎಸ್ 2 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
ಮೈತ್ರಿಯಲ್ಲಿ ಯಾರಿಗೆ ಎಷ್ಟು ಸ್ಥಾನ ಬಿಡಬೇಕು ಎಂಬ ಬಗ್ಗೆ ಚರ್ಚೆ ಅಂತಿಮವಾಗಿದೆ. ಆದರೆ ಎಲ್ಲಿ ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಈ ಬಗ್ಗೆ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಅಂತಿಮವಾಗಿ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದರು.