ಮೈಸೂರು: ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ಹಾಗೂ ಸಂತ್ರಸ್ತ ಮಹಿಳಾ ಅಪಹರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜತೆ ಎನ್‌ಡಿಎ ಮೈತ್ರಿ ಅಂತರ ಕಾಯ್ದುಕೊಂಡಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ನಿರಾಕರಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದೇಶವನ್ನಾಳುತ್ತಿರುವ ಮೋದಿ ಹಾಗೂ ಅಮಿತ್ ಶಾ ಅವರು ತಮ್ಮೊಂದಿಗೆ ಮೈತ್ರಿ ಮಾಡಿಕೊಂಡಿರುವವರನ್ನು ಯಾವತ್ತು ಕೈ ಬಿಟ್ಟಿಲ್ಲ. ಎನ್‌ಡಿಯ ಮೈತ್ರಿ ಮುರಿದು ಹೋದ ನಿತೀಶ್ ಕುಮಾರ್ ಅವರನ್ನೇ ಮತ್ತೆ ಬಂದ ಮೇಲೆ ಸಿಎಂ ಮಾಡಿದ್ದಾರೆ ಎಂದರು.
ನಾವು ಪ್ರಜ್ವಲ್ ಅವರ ಕೆಲಸವನ್ನು ಸಮರ್ಥಿಸಿಕೊಂಡಿದ್ದರೇ ಅವರು ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದರು. ಆದರೆ, ನಾವು ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಬೇಕು ಎಂಬ ನಿಲುವನ್ನು ಹೊಂದಿದ್ದೇವೆ. ಹಾಗಾಗಿ ಇದು ಮೈತ್ರಿಗೆ ಯಾವುದೇ ಧಕ್ಕೆ ತರುವುದಿಲ್ಲ ಎಂದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…