ಮೈಸೂರು

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು ಜಿಲ್ಲೆಯ ವಿವಿಧೆಡೆ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂಬ ದೃಷ್ಟಿಯಿಂದ ಈ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದರು.

ಫೆ.18 ರಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಶಾಸಕ ಮಹದೇವು ಅವರ ನೇತೃತ್ವದಲ್ಲಿ ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ. ಫೆ.22 ರಂದು ಕೆ.ಆರ್.ನಗರದ ರೇಡಿಯೋ ಮೈದಾನದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಫೆ.24 ರಂದು ಮಾಜಿ ಶಾಸಕ ಅಶ್ವಿನ್‌ಕುಮಾರ್ ನೇತೃತ್ವದಲ್ಲಿ ತಿ.ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ಸಂಜೆ 4 ಗಂಟೆಗೆ ಸಮಾವೇಶ ನಡೆಸಲಾಗುತ್ತಿದೆ. ಫೆ.25 ರಂದು ಬೆಳಿಗ್ಗೆ 11ಗಂಟೆಗೆ ಹುಣಸೂರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದ ಅವರು, ಚಾಮುಂಡೇಶ್ವರಿ, ವರುಣ, ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಲ್ಲಿ ನಡೆಸುವ ಸಮಾವೇಶದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಬೇಕಿದೆ ಎಂದರು.

ಈ ಎಲ್ಲಾ ಸಮಾವೇಶಗಳಲ್ಲಿ ಜಾ.ದಳ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಜರಿರಲಿದ್ದಾರೆ. ಮೈಸೂರು ನಗರಾಧ್ಯಕ್ಷ ಎಸ್‌ಬಿಎಂ ಮಂಜು ಹಾಗೂ ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್ ಅವರುಗಳ ಸಾರಥ್ಯದಲ್ಲಿ ಈ ಕಾರ್ಯಕ್ರಮಗಳು ಜರುಗಲಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಜಾ.ದಳ ಅಭಿಮಾನಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ನೇಮಕ
ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ, ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ನಗರ ಘಟಕಗಳಲ್ಲಿ ಕೆಲ ಬದಲಾವಣೆಯನ್ನು ಮಾಡಲು ನಿರ್ಧರಿಸಲಾಗಿದೆ. ಪಕ್ಷ ಸಂಘಟನೆಗೆ ಹೊಸಬರಿಗೂ ಅಧಿಕಾರ ನೀಡಲು ಉದ್ದೇಶಿಸಲಾಗಿದೆ ಎಂದರು.

ಜನರು ರೋಸಿಹೋಗಿದ್ದಾರೆ
ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯಿಂದ ಜನರು ರೋಸಿಹೋಗಿದ್ದಾರೆ. ರಾಜ್ಯಸರ್ಕಾರ 7 ಲಕ್ಷ ಕೋಟಿ ರೂ. ಸಾಲದ ಹೊರೆಯನ್ನು ಜನರ ಮೇಲೆ ಹೊರಿಸಿದೆ. ಎಲ್ಲಾ ಬೆಲೆಗಳೂ ಗಗನಕ್ಕೇರಿವೆ. ಈ ಉದ್ದೇಶದಿಂದ ಜನರು ಕಾಂಗ್ರೆಸ್‌ಗೆ ಪಾಠ ಕಲಿಸಲು ಮುಂದಿನ ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ ಎಂದರು.

ಪ್ರವಾಸದ ನೆಪದಲ್ಲಿ ಸಿದ್ದರಾಮಯ್ಯ ಅವರ ಬಣದ ಶಾಸಕರು ಹೋಗುತ್ತಿದ್ದಾರೆ. ಅಲ್ಲಿ ಏನು ನಡೆಯಬಹುದು ಎಂಬುದು ಗೊತ್ತಿಲ್ಲ. ಬಹುಶಃ ಅಲ್ಲಿ ಸೂಟ್‌ಕೇಸ್ ಕೈ ಬದಲಾಗಬಹುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ತಿಳಿಯಲಿದೆ ಎಂದರು.

ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕ ಕೆ.ಮಹದೇವು, ಜಾ.ದಳ ಜಿಲ್ಲಾಧ್ಯಕ್ಷ ಅಶ್ವಿನ್‌ಕುಮಾರ್, ಮೈಸೂರು ನಗರಾಧ್ಯಕ್ಷ ಎಸ್‌ಬಿಎಂ ಮಂಜು,ಮಾಜಿ ಮಹಾಪೌರರಾದ ಎಂ.ಜೆ.ರವಿಕುಮಾರ್, ಆರ್.ಲಿಂಗಪ್ಪ, ಭಾಗ್ಯ, ರಮೇಶ್, ಅಭಿಷೇಕ್, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್, ಅಮ್ಮ ಸಂತೋಷ್ ಮುಂತಾದವರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

6 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

6 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

7 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

7 hours ago