Mysore
22
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

ಜಿಟಿಡಿ ನಿವಾಸಕ್ಕೆ ದೇವೇಗೌಡ ಭೇಟಿ

ಮೈಸೂರು : ನಗರದೆಲ್ಲೆ ನಡೆಯುತ್ತಿರುವ ಜೆಡಿಎಸ್​ ಕಾರ್ಯಗಾರದಲ್ಲಿ ಭಾಗವಹಿಸಿದ ದೇವೇಗೌಡ, ಇದೇ ಸಂದರ್ಭದಲ್ಲಿ ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ನಿವಾಸಕ್ಕೆ ಇಂದು(ಅಕ್ಟೋಬರ್ 20) ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ದೇವೇಗೌಡ ಈ ಅಸ್ತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಇನ್ನು ಮನೆಗೆ ಬಂದ ಎಚ್.ಡಿ. ದೇವೇಗೌಡರನ್ನು ಜಿಟಿಡಿ ಕುಟುಂಬ ಪ್ರೀತಿಯಿಂದ ಬರ ಮಾಡಿಕೊಂಡಿದೆ.

ರಾಜಕೀಯ ನಿಲುವು ಪ್ರಕಟಿಸಿದ ಜಿಟಿಡಿ

ಎಚ್​ಡಿಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಜೆಡಿಎಸ್​ ಬಿಟ್ಟು ಹೋಗಲ್ಲ. ಎಲ್ಲ ಪಕ್ಷದವರೂ ನನ್ನನ್ನ ಕರೆದಿದ್ದಾರೆ, ದಯವಿಟ್ಟು ನನ್ನ ಕ್ಷಮಿಸಿ. ಕಾಂಗ್ರೆಸ್​ನಿಂದ ಸಿದ್ದರಾಮಯ್ಯನವರೂ ನನ್ನನ್ನು ಕರೆದಿದ್ದಾರೆ. ಬಿಜೆಪಿಯವರೂ ನನಗೆ ಬಂದು ಬಿಡಿ ಎಂದು ಹೇಳಿದ್ದಾರೆ. ಆದರೆ ನಾವು JDS​ ಪಕ್ಷದಿಂದ ನಾವು ಬೆಳೆದಿದ್ದೇವೆ. ಜೆಡಿಎಸ್​ ಪಕ್ಷವನ್ನ ಕಟ್ಟುವುದೇ ನಮ್ಮ ಗುರಿ ಎಂದ ಜಿಟಿಡಿ ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್, ಬಿಜೆಪಿ ಸೇರುವ ವದಂತಿಗಳಿಗೆ ತೆರೆ ಎಳೆದರು. ಅಲ್ಲದೇ ನಮ್ಮ ಪಕ್ಷಕ್ಕೆ ಬರ್ತಾರೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಭಾರೀ ನಿರಾಸೆಯಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!