Mysore
27
clear sky

Social Media

ಶುಕ್ರವಾರ, 30 ಜನವರಿ 2026
Light
Dark

JDS | ರಾಜಕೀಯ ಸಮಿತಿಗೆ ಸಾ.ರಾ.ಮಹೇಶ್‌ ನೇಮಕ

ಮೈಸೂರು : ಜಾ.ದಳದ ರಾಜಕೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ನೇಮಿಸಲಾಗಿದೆ.

ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ರಚನೆ ಮಾಡಿದ್ದಾರೆ. ಪಕ್ಷದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಮಹತ್ವದ ವಿಷಯಗಳ ಮೇಲೆ ಸಮಿತಿ ನಿರ್ಣಯಗಳನ್ನು ಕೈಗೊಳ್ಳಲಿದೆ.

ಕುಮಾರಸ್ವಾಮಿ ನೇತೃತ್ವದ ಈ ಸಮಿತಿಯಲ್ಲಿ ಶಾಸಕಿ ಶಾರದಾ ಪೂರ‍್ಯಾನಾಯಕ್ ಸಂಚಾಲಕರಾಗಿದ್ದು, ಮಾಜಿ ಸಚಿವ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಜಾ.ದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಜಾ.ದಳ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇದನ್ನು ಓದಿ : 13 ವರ್ಷಗಳ ನಂತರ ತಮಿಳು ಸಿನಿಮಾಗೆ ಎಂಟ್ರಿ ಕೊಟ್ಟಾ ಮೇಘನಾ ರಾಜ್‌

ಈ ಸಮಿತಿಯು ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ಪಕ್ಷ ಸಂಘಟನೆ, ಬಲವರ್ಧನೆ, ನಾಯಕತ್ವವನ್ನು ರೂಪಿಸುವುದರಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ರೀತಿಯ ಕ್ರಮ ಕೈಗೊಳ್ಳಲಿದೆ.

ಪ್ರಚಲಿತದಲ್ಲಿರುವ ಸೂಕ್ಷ್ಮಹಾಗೂ ಕ್ಲಿಷ್ಟ ಸಮಸ್ಯೆಗಳನ್ನು ಅವಲೋಕಿಸಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಗಳಿಗೆ ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಪ್ರಣಾಳಿಕೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಿದೆ. ಅಲ್ಲದೇ, ಎನ್‌ಡಿಎ ಮೈತ್ರಿಕೂಟದ ಹಿತದೃಷ್ಟಿಯಿಂದ ಹೊಂದಾಣಿಕೆ ಮತ್ತು ಸಮನ್ವಯತೆಗೆ ಕಾರ್ಯಕ್ರಮ ರೂಪಿಸುವುದರ ಜೊತೆಗೆ ಕನಿಷ್ಠ ೩ ತಿಂಗಳಿಗೊಮ್ಮೆ ಸಭೆ ಸೇರಿ ಮಹತ್ವದ ವಿಷಯಗಳ ಬಗ್ಗೆ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ.

Tags:
error: Content is protected !!