Categories: ಮೈಸೂರು

ಜೆಡಿಎಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ರಾಜಕಾರಣವನ್ನೇ ಬಿಡುವೆ ಎಂದ ಜಿಟಿ ದೇವೇಗೌಡ

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ.

ʻಜಿಟಿಡಿ ಅವರನ್ನು ದೇವೇಗೌಡರು ಕರೆ ಮಾಡಿ ಕರೆದಿದ್ದರುʼ ಎಂಬ ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿಕೆಗೆ ಸೋಮವಾರ ತಿರುಗೇಟು ನೀಡಿದ ಜಿಟಿ ದೇವೇಗೌಡರು, ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಬರುವಂತೆ ಎಚ್‌.ಡಿ ದೇವೇಗೌಡರು ನನ್ನ ಕರೆದಿಲ್ಲ. ಕರೆದಿದ್ದೆ ಎಂದು ಅವರು ಹೇಳಿದರೆ, ನಾನು ಅಂದೇ ರಾಜಕಾರಣ ಬಿಟ್ಟು ಬಿಡುತ್ತೇನೆ ಎಂದರು.

ಸಾ.ರಾ ಮಹೇಶ್‌ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಪ್ರಮಾಣ ಮಾಡುತ್ತೇನೆ ಚಾಮುಂಡಿಬೆಟ್ಟಕ್ಕೆ ಬಾ, ಅಲ್ಲಿಗೆ ಬಾ ಅಂದರೆ ಹೋಗಲಾಗುತ್ತದೆಯೇ? ಎಂದು ಖಾರವಾಗಿ ಕೇಳಿದರು.

ಈ ಹಿಂದೆ ವಿಶ್ವಾನಾಥ್‌ ಜೊತೆ ಒಂದು ಬಾರಿ ಚಾಮುಂಡಿಬೆಟ್ಟಕ್ಕೆ ಹೋಗಿದ್ದಕ್ಕೆ ಏನಾಯಿತು ಎಂಬುದನ್ನು ಅವರ ನೆನಪಿನಲ್ಲಡಲಿ ಅವರಿಗಾದ ಹಾಗೇ ನನಗೂ ಹಾಗಬೇಕಾ ಎಂದು ವಾಗ್ದಾಳಿ ನಡೆಸಿದರು.

ಮುಂದುವರಿದು ಮಾತನಾಡುತ್ತಾ, ನಾನು ಯಾರ ಹೆಸರು ಹೇಳಿಕೊಂಡು ರಾಜಕಾರಣ ಮಾಡುವ ಆಗತ್ಯ ಇಲ್ಲ. ಯಾರ ಬೆಂಬಲವಿಲ್ಲದೆಯೂ ಸ್ವಂತವಾಗಿ ನನಗೆ ರಾಜಕೀಯ ಮಾಡುವುದು ಗೊತ್ತು, ಸ್ವಂತ ರಾಜಕೀಯದಿಂದ ಇಲ್ಲಿಯವರೆಗೆ ಬಂದಿದ್ದೇನೆ ಯಾರ ಕತ್ತನ್ನು ಕೊಯ್ದಿಲ್ಲ ಎಂದು ಹೇಳಿದರು.

ಜೆಡಿಎಸ್‌ನಿಂದ ನನಗೆ ಹಲವು ಬಾರಿ ನೋವಾಗಿದೆ ಇದು ಹೊಸದೇನಲ್ಲ. ಪದೇ ಪದೇ ನೋವಾಗುವುದು ನನಗೆ ಕರಗತವಾಗಿದೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ಇನ್ನು ಸಿಎಂ ಇಬ್ರಾಹಿಂ ಭೇಟಿಯ ಕುರಿತು ಪ್ರತಿಕ್ರಿಯಿಸಿ ಜಿಟಿಡಿ, ಇಬ್ರಾಹಿಂಗೆ ಪ್ರಾದೇಶಿಕ ಪಕ್ಷ ಕಟ್ಟಬೇಕು ಅಂಬ ಆಸೆ ಇದೆ ಈ ಕುರಿತು ನನ್ನ ಜೊತೆ ಚರ್ಚಿಸಿದ್ದಾರೆ. ರಾಜ್ಯ ಪ್ರವಾಸ ಮುಗಿಸಿದ ನಂತರ ಈ ಕುರಿತು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

35 mins ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

1 hour ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

2 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

2 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

2 hours ago