ಮೈಸೂರು

ಗುಳಿಗೆ ಸಿದ್ದ ಒಳಗೆ ಮೇಯ್ದ: ನಿಮ್ಮ ಅಕ್ರಮಕ್ಕೆ ಈ ಲೆಟರ್‌ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್‌ ಟಾಂಗ್‌

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮೈಸೂರು ನಗರಾಭಿವೃದ್ಧಿ ಮಂಡಳಿಯಿಂದ ಜೆಡಿಎಸ್‌ ಈ ಲೇಟರ್‌ ಬಹಿರಂಗಗೊಳಿಸಿದೆ.

“ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… ಎಂದು ಜೆಡಿಎಸ್‌ ಟೀಕಿಸಿದೆ.

“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ವ್ಯಂಗ್ಯವಾಡಿದೆ.

ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …?

ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ… ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಎಂದು ಜೆಡಿಎಸ್‌ ಆಗ್ರಹಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

11 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago